ಶಿವರಾತ್ರಿ ಜಾತ್ರಾ ಮಹೋತ್ಸವ: ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧ
ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಶಿವರಾತ್ರಿ ಜಾತ್ರಾ ಮಹೋತ್ಸವಕ್ಕಾಗಿ ಹೊರಗಿನ ಭಕ್ತರು ಬಾರದಂತೆ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದಿನಿಂದ 5 ದಿನ ಪ್ರವೇಶ ನಿಷೇಧಿಸಲಾಗಿದೆ.
Published: 10th March 2021 11:31 AM | Last Updated: 10th March 2021 12:30 PM | A+A A-

ಮಲೈ ಮಹಾದೇಶ್ವರ ಬೆಟ್ಟ ದೇವಾಲಯ
ಚಾಮರಾಜನಗರ: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಶಿವರಾತ್ರಿ ಜಾತ್ರಾ ಮಹೋತ್ಸವಕ್ಕಾಗಿ ಹೊರಗಿನ ಭಕ್ತರು ಬಾರದಂತೆ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದಿನಿಂದ 5 ದಿನ ಪ್ರವೇಶ ನಿಷೇಧಿಸಲಾಗಿದೆ.
ಈ ಹಿನ್ನಲೆಯಲ್ಲಿ ಸರಳವಾಗಿ ಶಿವರಾತ್ರಿ ಜಾತ್ರಾ ಮಹೋತ್ಸವ ಆಚರಿಸಲಾಗುತ್ತಿದೆ. ಮಲೆಮಹದೇಶ್ವರ ರಥೋತ್ಸವ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಲಕ್ಷಾಂತರ ಜನರು ಸೇರುತ್ತಿದ್ದರು. ಈ ಬಾರಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕೇವಲ ಬೆಟ್ಟದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ಥಳೀಯ ಭಕ್ತರಿಗಷ್ಟೇ ಮಾತ್ರ ಜಿಲ್ಲಾಡಳಿತ ಅವಕಾಶ ನೀಡಿದೆ.
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದಿನಿಂದ 4 ದಿನಗಳ ಕಾಲ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸರಳವಾಗಿ ಶಿವರಾತ್ರಿ ಜಾತ್ರೆ ಮಹೋತ್ಸವ ಆಚರಿಸಲಾಗುತ್ತಿದ್ದು, ಹೀಗಾಗಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಲೆ ಮಹದೇಶ್ವರ ಬೆಟ್ಟಕ್ಕೆ ಹೊರಗಿನ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ.
ಮಲೆಮಹದೇಶ್ವರ ರಥೋತ್ಸವಕ್ಕೆ ಪ್ರತಿವರ್ಷ ಲಕ್ಷಾಂತರ ಜನರು ಬರುತ್ತಿದ್ದರು. ಈ ಬಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು ಸ್ಥಳೀಯರಿಗೆ ಮಾತ್ರ ಮಾದಪ್ಪನ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.