ಮತ್ತೆ ಕೋವಿಡ್ ಆತಂಕ: ತಡರಾತ್ರಿ ಪಾರ್ಟಿಗಳ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ

ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಕೋವಿಡ್-19 ಪ್ರಕರಣಗಳಲ್ಲಿ ಮತ್ತೆ ಏರಿಕೆ ಕಂಡುಬರುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ತಡರಾತ್ರಿಯ ಎಲ್ಲಾ ಪಾರ್ಟಿಗಳನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಘೋಷಿಸಿದ್ದಾರೆ.

Published: 11th March 2021 01:26 PM  |   Last Updated: 11th March 2021 02:49 PM   |  A+A-


ಡಾ ಕೆ ಸುಧಾಕರ್

Posted By : Raghavendra Adiga
Source : Online Desk

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಕೋವಿಡ್-19 ಪ್ರಕರಣಗಳಲ್ಲಿ ಮತ್ತೆ ಏರಿಕೆ ಕಂಡುಬರುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ತಡರಾತ್ರಿಯ ಎಲ್ಲಾ ಪಾರ್ಟಿಗಳನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಘೋಷಿಸಿದ್ದಾರೆ. ಏಕೆಂದರೆ ಇಂತಹಾ ಪಾರ್ಟಿಗಳು ಸೂಪರ್ ಸ್ಪ್ರೆಡರ್ ಇವೆಂಟ್ ಗಳಾಗಿ ಪರಿಣಮಿಸಬಹುದು ಎಂದು ಅವರು ಹೇಳಿದರು.

ಬುಧವಾರ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸುಧಾಕರ್ ಕೊರೋನಾ ಸೋಂಕು ಮತ್ತಷ್ಟು ಹರಡುವುದನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸ್ಟಾರ್ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳೂ ಸೇರಿದಂತೆ ಹೋಟೆಲ್‌ಗಳಿಗೆ ಸೂಚನೆ ನೀಡಲಾಗಿದೆ. "ಸರ್ಕಾರವು ತಡರಾತ್ರಿ ಪಾರ್ಟಿಗಳನ್ನು ನಿಷೇಧಿಸಿದೆ. ಏಕೆಂದರೆ ಅಂತಹ ಪಾರ್ಟಿಗಳಲ್ಲಿ ಹೆಚ್ಚಿನ ಜನರು ಒಂದೇ ಸ್ಥಳದಲ್ಲಿ ಸೇರುತ್ತಾರೆ. ಅಲ್ಲದೆ, ನೆರೆಯ ರಾಜ್ಯಗಳು ಕೋವಿಡ್-19 ಹೆಚ್ಚಳಕ್ಕೆ ಸಾಕ್ಷಿಯಾಗುತ್ತಿವೆ. ಆದ್ದರಿಂದ, ಬೆಂಗಳೂರಿನಲ್ಲಿ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಎಲ್ಲಾ ಕ್ರಮ ತೆಗೆದುಕೊಳ್ಳಬೇಕಿದೆ" ಎಂದು ಅವರು ಹೇಳಿದರು.

ಇನ್ನು ಮದುವೆ ಸಮಾರಂಭಗಳಲ್ಲಿ ಮತ್ತು ಇತರ ರೀತಿಯ ಸಮಾರಂಭಗಳಲ್ಲಿ ದೊಡ್ಡ ಮಟ್ಟದ ಔತಣ ಕೂಟಗಳನ್ನು ನಿರ್ಬಂಧಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಆದರೆ, ಅಂತರರಾಜ್ಯ ಪ್ರಯಾಣಕ್ಕೆ ಯಾವುದೇ ನಿರ್ಬಂಧಗಳಿಲ್ಲ ಎಂದು ಡಾ.ಸುಧಾಕರ್ ಸ್ಪಷ್ಟಪಡಿಸಿದರು.


Stay up to date on all the latest ರಾಜ್ಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp