
ಬಿಎಸ್ ಯಡಿಯೂರಪ್ಪ
ಬೆಂಗಳೂರು: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಬೆಂಗಳೂರಿನ ಕಾಡು ಮಲ್ಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದ ಜನತೆ ನೆಮ್ಮದಿಯಾಗಿ ಜೀವನ ನಡೆಸಲೆಂದು ಪ್ರಾರ್ಥಿಸಿರುವುದಾಗಿ ಹೇಳಿದರು.
ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದೆ, ಕೊರೊನಾ ಹಿನ್ನೆಲೆ ಜನರು ಎಚ್ಚರಿಕೆಯಿಂದಿರಬೇಕು. ಕೊರೊನಾ ನಿಯಮ ಪಾಲನೆ, ಇದರ ಜೊತೆಗೆ ಸಾಮಾಜಿಕ ಅಂತರ ಪಾಲಿಸಬೇಕು, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಹಬ್ಬಗಳ ಸಾಲಿನಲ್ಲಿ ಯಾವುದೇ ಕಾರಣಕ್ಕೂ ಎಚ್ಚರ ತಪ್ಪಬಾರದು ಎಂದೂ ಸಿಎಂ ಕಿವಿಮಾತು ಹೇಳಿದರು.
ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಹೆಚ್ಚುತ್ತಿದ್ದು, ಗುರುವಾರ 783 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,57,584ಕ್ಕೆ ಏರಿಕೆಯಾಗಿದೆ.