ಬಳ್ಳಾರಿಯಲ್ಲಿ ಭೀಕರ ಅಪಘಾತ: ಶಿವ ದರ್ಶನ ಮಾಡಿ ವಾಪಸಾಗುತ್ತಿದ್ದ ಮೂವರು ಸಾವು

ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಬೈಪಾಸ್​ ಬಳಿ ಗುರುವಾರ ರಾತ್ರಿ ಸಂಭವಿಸಿದೆ.

Published: 12th March 2021 01:27 PM  |   Last Updated: 12th March 2021 01:29 PM   |  A+A-


Representational image

ಸಾಂದರರ್ಭಿಕ ಚಿತ್ರ

Posted By : Shilpa D
Source : UNI

ಬಳ್ಳಾರಿ: ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಬೈಪಾಸ್​ ಬಳಿ ಗುರುವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಬಳ್ಳಾರಿ ತಾಲೂಕಿನ ಎರಂಗಳಿ ಗ್ರಾಮದ ತಿರುಮಲ (25), ಪ್ರಕಾಶ (14), ಶರತ್ (25) ಎಂದು ಗುರುತಿಸಲಾಗಿದೆ. ಮಹಾಶಿವರಾತ್ರಿ ನಿಮಿತ್ತ ಶಿವನ ದರ್ಶನ ಪಡೆದು ಊರಿಗೆ ವಾಪಸ್ಸಾಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ಘಟನೆಯಲ್ಲಿ ವೆಂಕಟೇಶ, ಮಲ್ಲಿಕಾರ್ಜುನ, ಲಿಂಗೇಶ್ ಎಂಬುವವರು ಗಾಯಗೊಂಡಿದ್ದು, ಬಳ್ಳಾರಿ ವಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಪ್ರಕರಣ ದಾಖಿಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 


Stay up to date on all the latest ರಾಜ್ಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp