ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಿಎಂ ಯಡಿಯೂರಪ್ಪಗೆ ಕೊರೋನಾ ಲಸಿಕೆ
ದೇಶಾದ್ಯಂತ ಮಾರ್ಚ್ 1ರಿಂದ ಎರಡನೇ ಹಂತದ ಕೊರೋನಾ ಲಸಿಕಾ ಅಭಿಯಾನ ಆರಂಭಗೊಂಡಿದೆ. ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೂ ಕೂಡ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಹಾಕಿಸಿಕೊಳ್ಳಲಿದ್ದಾರೆ.
Published: 12th March 2021 11:42 AM | Last Updated: 12th March 2021 01:06 PM | A+A A-

ಸಿಎಂ ಯಡಿಯೂರಪ್ಪ
ಬೆಂಗಳೂರು: ದೇಶಾದ್ಯಂತ ಮಾರ್ಚ್ 1ರಿಂದ ಎರಡನೇ ಹಂತದ ಕೊರೋನಾ ಲಸಿಕಾ ಅಭಿಯಾನ ಆರಂಭಗೊಂಡಿದೆ. ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೂ ಕೂಡ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಹಾಕಿಸಿಕೊಳ್ಳಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ಯಡಿಯೂರಪ್ಪ ಅವರು ಕೋವಿಡ್ ಲಸಿಕೆ ಪಡೆಯಲಿದ್ದಾರೆಂದು ವರದಿಗಳು ತಿಳಿಸಿವೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿನ ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನಾ ಆಸ್ಪತ್ರೆಯಲ್ಲಿ ಲಸಿಕೆ ಪಡೆಯಲಿದ್ದು, ಆ ಬಳಿಕ ವಿಶ್ರಾಂತಿ ಪಡೆಯಲಿದ್ದಾರೆಂದು ಹೇಳಲಾಗುತ್ತಿದೆ.
2ನೇ ಹಂತದ ಲಸಿಕಾ ಅಭಿಯಾನದಲ್ಲಿ ಸಾರ್ವಜನಿಕರಿಗೂ ಲಸಿಕೆ ನೀಡಿಕೆ ಪ್ರಾರಂಭಗೊಂಡಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಅನೇಕ ಸಚಿವರು ಕೊರೋನಾ ಲಸಿಕೆಯನ್ನು ಪಡೆದಿದ್ದರು. ಆ ಮೂಲಕ ಜನ ಸಾಮಾನ್ಯದಲ್ಲಿನ ಅನಗತ್ಯ ಆತಂಕವನ್ನು ದೂರ ಮಾಡಿದ್ದರು.
ಜನಪ್ರತಿನಿಧಿಗಳೂ ಹಾಗೂ ಸಚಿವರು ಕೊರೋನಾ ಲಸಿಕೆಗಳನ್ನು ಹಾಕಿಸಿಕೊಂಡ ಬಳಿಕ ಇತ್ತೀಚಿನ ದಿನಗಳಲ್ಲಿ ಲಸಿಕೆ ಹಾಕಿಸಿಕೊಳ್ಳುತ್ತಿರುವವರ ಪ್ರಮಾಣ ಹೆಚ್ಚಾಗುತ್ತಿದೆ. ಈ ವರೆಗೂ ದೇಶದಲ್ಲಿ ಒಟ್ಟಾರೆ 2,61,64,920 ಮಂದಿ ಲಸಿಕೆಯನ್ನು ಪಡೆದುಕೊಂಡಿದ್ದಾರೆ.