ಕೋವಿಡ್-19 ಹಿನ್ನೆಲೆಯಲ್ಲಿ ಶಾಲಾ ಕಾಲೇಜು ನೋಂದಣಿ ನವೀಕರಣಕ್ಕೆ ವಿಶೇಷ ವಿನಾಯಿತಿ: ಸುರೇಶ್ ಕುಮಾರ್

ಕೋವಿಡ್-19ರ ನಂತರದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಈ ಶೈಕ್ಷಣಿಕ ಸಾಲಿಗೆ ಸೀಮಿತಗೊಳಿಸಿ, 2017-18ನೇ ಸಾಲಿಗೆ ಪೂರ್ವದಿಂದಲೂ ಅಸ್ತಿತ್ವದಲ್ಲಿರುವ ಅನುದಾನಿತ....

Published: 12th March 2021 04:15 PM  |   Last Updated: 12th March 2021 04:39 PM   |  A+A-


Suresh Kumar

ಸುರೇಶ್ ಕುಮಾರ್

Posted By : Lingaraj Badiger
Source : UNI

ಬೆಂಗಳೂರು: ಕೋವಿಡ್-19ರ ನಂತರದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಈ ಶೈಕ್ಷಣಿಕ ಸಾಲಿಗೆ ಸೀಮಿತಗೊಳಿಸಿ, 2017-18ನೇ ಸಾಲಿಗೆ ಪೂರ್ವದಿಂದಲೂ ಅಸ್ತಿತ್ವದಲ್ಲಿರುವ ಅನುದಾನಿತ ಹಾಗೂ ಅನುದಾನ ರಹಿತ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಕೆಲ ವಿನಾಯಿತಿಗಳನ್ನು ನೀಡಲಾಗಿದೆ.

ಹೆಚ್ಚುವರಿ ವಿಭಾಗ, ವಿಷಯ, ಭಾಷೆ ಮತ್ತು ಸಂಯೋಜನೆಗಳಿಗೆ ಅನುಮತಿ ಹಾಗೂ ನವೀಕರಿಸುವ ಸಂದರ್ಭದಲ್ಲಿ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ, ಕಟ್ಟಡ ಸುರಕ್ಷತಾ ಪ್ರಮಾಣ ಪತ್ರಗಳ ದಾಖಲೆಗಳನ್ನು ಸಲ್ಲಿಸಲು ವಿನಾಯಿತಿಯನ್ನು ನೀಡಿ ಕಳೆದ ಶೈಕ್ಷಣಿಕ ಸಾಲಿನ ದಾಖಲೆಗಳ ಆಧಾರದಲ್ಲಿ ನೋಂದಣಿ, ನವೀಕರಣ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. 

ಈ ಬಗ್ಗೆ ಸರ್ಕಾರದ ಸ್ಪಷ್ಠೀಕರಣ ಬಿಡುಗಡೆ ಮಾಡಲಾಗಿದೆ ಎಂದಿರುವ ಸಚಿವರು, ಆರ್.ಟಿ.ಇ. ಮರುಪಾವತಿ, ದಾಖಲಾತಿ, ಹಾಜರಾತಿ. ನೋಂದಣಿ, ನವೀಕರಣದ ನೆಪದಲ್ಲಿ ಅನವಶ್ಯಕ ಸಮಸ್ಯೆಗಳಿಗೆ ಕಾರಣವಾಗದಂತೆ ಕ್ರಮ ವಹಿಸಬೇಕೆಂದು ಇಲಾಖಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. 

ಸರ್ವೋಚ್ಛ ನ್ಯಾಯಾಲಯದ ತೀರ್ಪಿನನ್ವಯ ವಿದ್ಯಾರ್ಥಿಗಳ ಸುರಕ್ಷತೆ, ಶಾಲಾ ಸುರಕ್ಷತೆ ಕುರಿತಂತೆ ಕಠಿಣ ಕ್ರಮಗಳನ್ನು ಅನುಸರಿಸಬೇಕಾಗಿರುವುದು ಸರ್ಕಾರದ ಪ್ರಾಥಮಿಕ ಜವಾಬ್ದಾರಿಯಾಗಿದ್ದು, ಅಸ್ತಿತ್ವದಲ್ಲಿರುವ ಹಾಗೂ ಹೊಸ ಶಿಕ್ಷಣ ಸಂಸ್ಥೆಗಳಿಗೆ ವಿಶಿಷ್ಠ ನಿಯಮಗಳ ರಚನೆಗೆ ಈಗಾಗಲೇ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಇವರ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿಯನ್ನ ರಚಿಸಿ ಆದೇಶವನ್ನು ಹೊರಡಿಸಲಾಗಿದೆ. ಒಂದು ತಿಂಗಳ ಅವಧಿಯಲ್ಲಿ ಈ ಸಮಿತಿಯು ವಿದ್ಯಾರ್ಥಿ ಸಂವೇದಿತವಾದ ಶಾಲಾ ಸುರಕ್ಷತಾ ಕ್ರಮಗಳನ್ನು ಇಲ್ಲಿಯವರೆಗಿನ ಇಲಾಖಾದೇಶಗಳು, ನ್ಯಾಯಾಲಯಗಳ ತೀರ್ಪುಗಳನ್ನು ಸಮಗ್ರವಾಗಿ ಪರಿಶೀಲಿಸಲಿದೆ ಎಂದು ಅವರು ಹೇಳಿದ್ದಾರೆ.

ಶಾಲೆಯ ಭೌತಿಕ ಸುರಕ್ಷತೆ, ಮೂಲಭೂತ ಸೌಕರ್ಯ, ವಿಪತ್ತು ನಿರ್ವಹಣೆ, ಆರೋಗ್ಯ, ಸಾರಿಗೆ, ತುರ್ತು ಸನ್ನದ್ದತೆ ಸೇರಿದಂತೆ ಎಲ್ಲ ಆಯಾಮಗಳನ್ನು ಈ ಸಮಿತಿಯು ಸಮಗ್ರವಾಗಿ ಅವಲೋಕಿಸಲಿದೆ. ಈ ಸಮಿತಿಯು ವಿದ್ಯಾರ್ಥಿಗಳ ಸುರಕ್ಷತೆಗೆ ಯಾವುದೇ ರಾಜಿ ಇಲ್ಲದ ರೀತಿಯಲ್ಲಿ ನಿಯಮಗಳನ್ನು ರೂಪಿಸಲಿದೆ ಎಂದು ಅವರು ಹೇಳಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp