ಕೊರೋನಾ ಲಸಿಕೆ ಪಡೆದ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ಇಲ್ಲಿಯವರೆಗೆ ಶೇ.4ರಷ್ಟು ಹಿರಿಯ ನಾಗರಿಕರಿಗೆ ಲಸಿಕೆ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ಶುಕ್ರವಾರ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದರು.

Published: 12th March 2021 06:19 PM  |   Last Updated: 12th March 2021 06:19 PM   |  A+A-


cm-sudhakar

ಯಡಿಯೂರಪ್ಪ - ಸುಧಾಕರ್

Posted By : Lingaraj Badiger
Source : The New Indian Express

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ಶುಕ್ರವಾರ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದರು.

ಕೊರೋನಾ ಲಸಿಕೆ ಪಡೆದ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು 30 ನಿಮಿಷಗಳ ಕಾಲ ವೈದ್ಯರು  ಅಬ್ಸರ್ವೇಷನ್ ನಲ್ಲಿ ಇರಿಸಿದರು. ಬಳಿಕ ಮಾತನಾಡಿದ ಸಿಎಂ, ಲಸಿಕೆ ಹಾಕಿಸಿಕೊಂಡರೆ ಯಾವುದೇ ಸಮಸ್ಯೆ ಅಗೋದಿಲ್ಲ. ನಾನು ದೇಸಿ ಲಸಿಕೆ ಕೋವ್ಯಾಕ್ಸಿನ್ ಹಾಕಿಸಿಕೊಂಡಿದ್ದೇನೆ. ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬಹುದು. ಯಾವುದೇ ಸೈಡ್ ಎಫೆಕ್ಟ್ ಇರೋದಿಲ್ಲ. ಲಸಿಕೆ ಹಾಕಿಸಿಕೊಂಡ ಬಳಿಕ ಒಂದು ಇಪ್ಪತ್ತು ನಿಮಿಷ ಕೂರಲು ವೈದ್ಯರು ಹೇಳ್ತಾರೆ ಅಷ್ಟೇ ಎಂದು ಹೇಳಿದರು.

ಇನ್ನು ಲಸಿಕೆ ಪಡೆದ ನಂತರ ಮಾತನಾಡಿದ ಸುಧಾಕರ್, ಎಲ್ಲ ಹಿರಿಯ ನಾಗರಿಕರು, ಅರ್ಹ ವ್ಯಕ್ತಿಗಳು ಆದಷ್ಟು ಬೇಗ ನೋಂದಣಿ ಮಾಡಿಕೊಂಡು ತಪ್ಪದೆ ಲಸಿಕೆ ಪಡೆಯಬೇಕೆಂದು ಕೋರಿದರು.

ಭಾರತ ಮತ್ತು ಕರ್ನಾಟಕವನ್ನು ಕೊರೋನಾ ಮುಕ್ತವಾಗಿಸಲು ನಾವೆಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದರು.

ಸ್ವತಃ ವೈದ್ಯರಾಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಮುಂಚೂಣಿ ಕಾರ್ಯಕರ್ತರ ಕೋಟಾದಡಿ ಲಸಿಕೆ ಪಡೆದಿದ್ದಾರೆ.

ಈ ಮಧ್ಯೆ, ಕರ್ನಾಟಕದ ಒಟ್ಟು 54,87,399 ವೃದ್ಧರ ಪೈಕಿ ಕೇವಲ ಶೇ.4ರಷ್ಟು ಜನರು ಮಾತ್ರ ಕೋವಿಡ್ -19 ಸ್ವೀಕರಿಸಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮಾ. 1ರಿಂದ ಹಿರಿಯ ನಾಗರಿಕರಿಗೆ ಲಸಿಕೆ ನೀಡುವ ಅಭಿಯಾನ ಆರಂಭಗೊಂಡಿದ್ದರೂ, ಇಲ್ಲಿಯವರೆಗೆ ಕೇವಲ 2,17,085 ಫಲಾನುಭವಿಗಳಿಗೆ ಮಾತ್ರ ಲಸಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

9,11,336 ಹಿರಿಯ ನಾಗರಿಕರನ್ನು ಹೊಂದಿರುವ ಎಲ್ಲಾ 30 ಜಿಲ್ಲೆಗಳಲ್ಲಿ ಬೆಂಗಳೂರು ನಗರವು ರಾಜ್ಯದಲ್ಲಿ ಅತಿ ಹೆಚ್ಚು ಹಿರಿಯ ನಾಗರಿಕರನ್ನು ಹೊಂದಿದೆ, ಈ ಪೈಕಿ 91,312 ಹಿರಿಯ ನಾಗರಿಕರಿಗೆ ಲಸಿಕೆ ನೀಡಲಾಗಿದೆ. ಇದು ಕೇವಲ ಶೇ.10ರಷ್ಟು ಲಸಿಕೆಯ ವ್ಯಕ್ತಿಯಾಗಿದೆ. ರಾಜ್ಯದಲ್ಲಿ ಬೆಳಗಾವಿ ಹಿರಿಯ ನಾಗರಿಕರಲ್ಲಿ ಎರಡನೇ ಸ್ಥಾನದಲ್ಲಿದೆ. ಇಲ್ಲಿ 4,47,953 ಹಿರಿಯ ನಾಗರಿಕರಿದ್ದು, ಈ ಪೈಕಿ 6,876 ಜನರಿಗೆ ಲಸಿಕೆ ನೀಡಲಾಗಿದೆ. ಇದು ಕೇವಲ 1.5 ಶೇಕಡಾ ವ್ಯಾಪ್ತಿಯಾಗಿದೆ.

ಹೆಚ್ಚಿನ ಸಂಖ್ಯೆಯ ವೃದ್ಧರನ್ನು ಹೊಂದಿರುವ ಇತರ ಮೂರು ಜಿಲ್ಲೆಗಳು ಮೈಸೂರು (2.79 ಲಕ್ಷ-ಲಸಿಕೆ-ಶೇ.3.6), ತುಮಕುರು (2.69, ಲಸಿಕೆ-ಶೇ.7.2), ದಕ್ಷಿಣ ಕನ್ನಡ (2.01 ಲಕ್ಷ, ಲಸಿಕೆ-ಶೇ.3.6) ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp