ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಇಒ: ಆರು ಲಕ್ಷ ರೂ. ನಗದು ಪತ್ತೆ

ಬೆಳಗೆರೆ ಗ್ರಾಮ ಪಂಚಾಯಿತಿಯ 14ನೇ ಹಣಕಾಸಿನ ಉಳಿಕೆ ಹಣದಲ್ಲಿ ರೂಪಿಸಿದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲು ಪಿಡಿಒ ಬಳಿ 20 ಸಾವಿರ ಲಂಚ ಪಡೆಯುತ್ತಿದ್ದ ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಇ.ಓ .ಶ್ರೀಧರ್ ಐ ಬಾರ್ ಕೇರ್ ಎಂಬುವರು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.

Published: 13th March 2021 01:02 PM  |   Last Updated: 13th March 2021 01:07 PM   |  A+A-


Representational imag

ಸಾಂದರ್ಭಿಕ ಚಿತ್ರ

Posted By : Shilpa D
Source : Online Desk

ಚಿತ್ರದುರ್ಗ: ಬೆಳಗೆರೆ ಗ್ರಾಮ ಪಂಚಾಯಿತಿಯ 14ನೇ ಹಣಕಾಸಿನ ಉಳಿಕೆ ಹಣದಲ್ಲಿ ರೂಪಿಸಿದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲು ಪಿಡಿಒ ಬಳಿ 20 ಸಾವಿರ ಲಂಚ ಪಡೆಯುತ್ತಿದ್ದ ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಇ.ಓ .ಶ್ರೀಧರ್ ಐ ಬಾರ್ ಕೇರ್ ಎಂಬುವರು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.

ಶ್ರೀಧರ್ ಅವರ ಮನೆ, ಕಚೇರಿ ಸೇರಿ ಹಲವೆಡೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳಿಗೆ ಆಸ್ತಿ ಪತ್ರಗಳು, ಬ್ಯಾಂಕ್ ಖಾತೆ ಹಾಗೂ 6 ಲಕ್ಷ  ರು.ನಗದು ಪತ್ತೆಯಾಗಿದೆ. ನಗದು ಹಣದ ಬಗ್ಗೆ ಸೂಕ್ತ ಮಾಹಿತಿ ನೀಡದ ಕಾರಣ ಶ್ರೀಧರ್ ಅವರನ್ನು ಎಸಿಬಿ ಬಂಧಿಸಿದೆ.

ಚಳ್ಳಕೆರೆ ತಾಲ್ಲೂಕಿನ ಬೆಳಗೆರೆ ಗ್ರಾಮ ಪಂಚಾಯಿತಿಯಲ್ಲಿ 14ನೇ ಹಣಕಾಸಿನಲ್ಲಿ ₹ 7.71 ಲಕ್ಷ ಅನುದಾನ ಉಳಿದಿತ್ತು. ಉಳಿಕೆ ಹಣದಲ್ಲಿ ಹತ್ತು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕ್ರಿಯೆಯೋಜನೆ ಸಿದ್ಧಪಡಿಸಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಲಾಗಿತ್ತು. 


Stay up to date on all the latest ರಾಜ್ಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp