ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: 50 ಕೋಟಿ ರು. ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿ

ಆಂಜನೇಯ ಜನಿಸಿರುವ ಸ್ಥಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಪರಿಶೀಲನಾ ಸಭೆ ನಡೆದಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ‘ಮಾಸ್ಟರ್‌ ಪ್ಲಾನ್‌’ ಮಾಡಲು ತೀರ್ಮಾನಿಸಲಾಗಿದೆ.

Published: 17th March 2021 08:57 AM  |   Last Updated: 17th March 2021 12:39 PM   |  A+A-


Anjanadri Hills

ಅಂಜನಾದ್ರಿ ಬೆಟ್ಟ

Posted By : Shilpa D
Source : The New Indian Express

ಬೆಂಗಳೂರು: ಆಂಜನೇಯ ಜನಿಸಿರುವ ಸ್ಥಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಪರಿಶೀಲನಾ ಸಭೆ ನಡೆದಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ‘ಮಾಸ್ಟರ್‌ ಪ್ಲಾನ್‌’ ಮಾಡಲು ತೀರ್ಮಾನಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಈ ಸಭೆ ನಡೆಯಿತು. ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಅಪರ ಮುಖ್ಯ ಕಾರ್ಯದರ್ಶಿ. ಅತೀಕ್‌, ಮಹೇಂದ್ರ ಜೈನ್‌, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಪಂಕಜ್‌ ಕುಮಾರ ಪಾಂಡೆ, ಜಂಗಲ್‌ ಲಾಡ್ಜಸ್‌ ವ್ಯವಸ್ಥಾಪಕ ನಿರ್ದೇಶಕ ಕುಮಾರ ಪುಷ್ಕರ, ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್‌ ಕಿಸೋರ ಸುರಳ್ಕರ್‌ ಭಾಗವಹಿಸಿದ್ದರು

ಐತಿಹಾಸಿಕ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಪ್ರಥಮ ಹಂತದಲ್ಲಿ ರೂ.50  ಕೋಟಿಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದು, ಮುಂದಿನ ಸಚಿವ ಸಂಪುಟದಲ್ಲಿ ಈ ವಿಷಯವನ್ನು ಮಂಡಿಸಿ ಅನುಮೋದನೆ ಪಡೆಯಲು ಸಭೆಯಲ್ಲಿ ನಿರ್ಧರಿಸಲಾಯಿತು.

ಏ.16 ರಂದು ಸಚಿವರಾದ ಕೆ.ಎಸ್. ಈಶ್ವರಪ್ಪ, ಸಿ.ಪಿ. ಯೋಗೇಶ್ವರ, ಕೋಟ ಶ್ರೀನಿವಾಸ ಪೂಜಾರಿ, ಬಿ.ಸಿ. ಪಾಟೀಲ್ ಹಾಗೂ ಅರವಿಂದ ಲಿಂಬಾವಳಿ ರವರು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಲಿದ್ದಾರೆ. ನಂತರ, ಅಂಜನಾದ್ರಿ ಬೆಟ್ಟಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಕಾಮಗಾರಿಗಳಿಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ.

ಪ್ರಥಮ ಹಂತದಲ್ಲಿ ಅಂಜನಾದ್ರಿ ಬೆಟ್ಟಕ್ಕೆ ಕುಡಿಯುವ ನೀರು, ಶೌಚಾಲಯ, ಸ್ನಾನದ ಗೃಹ ಮತ್ತು ರಸ್ತೆ ನಿರ್ಮಾಣ ಮಾಡುವುದು. ಕಸ ವಿಲೇವಾರಿಗೆ ಸಮರ್ಪಕ ವ್ಯವಸ್ಥೆ ಅಳವಡಿಸುವುದು. ಬೆಟ್ಟದ ಕೆಳಭಾಗದಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವುದು. ಬೆಟ್ಟದ ಮುಂಭಾಗದಲ್ಲಿರುವ ಹುಲಿಗಿ ಗಂಗಾವತಿ ರಾಜ್ಯ ಹೆದ್ದಾರಿಯನ್ನು 1 ಕಿ.ಮೀ. ಅಗಲೀಕರಣ ಮಾಡುವುದು. ಬೀದಿ ದೀಪಗಳನ್ನು ಅಳವಡಿಸುವುದು. ಸೇವಾ ಹಾಗೂ ಟಿಕೆಟ್ ಕೌಂಟರ್ ನಿರ್ಮಾಣ ಮಾಡುವುದು. ಪ್ರವಾಸಿಗರಿಗೆ ತುರ್ತು ಪರಿಸ್ಥಿತಿಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆ ಮಾಡುವುದು. ಮೊಬೈಲ್ ಸಂಪರ್ಕಕ್ಕಾಗಿ ಮೊಬೈಲ್ ಟವರ್ ಅಳವಡಿಸುವುದು ಎಂದು ತೀರ್ಮಾನಿಸಲಾಗಿದೆ.

ಆಯವ್ಯಯದಲ್ಲಿ 50 ಕೋಟಿ ರೂ ಗಳನ್ನು ಒದಗಿಶಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರು ತಮ್ಮ ಇಲಾಖೆಯಲ್ಲಿ ಮೀಸಲಿಟ್ಟಿರುವ ರೂ.26 ಲಕ್ಷಗಳನ್ನು ಹಾಗೂ ಮುಜರಾಯಿ ಇಲಾಖೆಯಲ್ಲಿರುವ ರೂ.14 ಲಕ್ಷ, ಪ್ರವಾಸೋದ್ಯಮ  ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ಹಣವನ್ನು ಮೀಸಲಿರಿಸಲಾಗಿದೆ. ಒಟ್ಟು ರೂ.50 ಕೋಟಿ ರು ವೆಚ್ಚದಲ್ಲಿ ಪ್ರಥಮ ಹಂತದ ಕಾಮಗಾರಿಗಳನ್ನು ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಎರಡನೇ ಹಂತದಲ್ಲಿ ಪ್ರವಾಸಿಗರು ತಂಗಲು ಯಾತ್ರಿ ನಿವಾಸ, ಹೋಟೆಲ್‌ ಹಾಗೂ ರೆಸಾರ್ಟ್‌ಗಳನ್ನು ನಿರ್ಮಾಣ ಮಾಡುವುದು. ಬ್ಯಾಟರಿ ಚಾಲಿತ ವಾಹನಗಳನ್ನು ಖರೀದಿಸುವುದು. ತುಂಗಭದ್ರಾ ನದಿಯಲ್ಲಿ ವಾಟರ್‌ ಸ್ಪೋಟ್ಸ್‌ರ್‍, ಬೆಟ್ಟಕ್ಕೆ ರೋಪ್‌ ವೇ ನಿರ್ಮಾಣ ಮಾಡುವುದು. ಋುಷಿಮುಖ ಪರ್ವತದಲ್ಲಿರುವ ಸತ್ಯನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ವೇದ, ವಾಸ್ತು, ಜ್ಯೋತಿಷ್ಯ, ಗೃಹ ನಕ್ಷತ್ರ, ಭೂಕಂಪನ, ಸಮುದ್ರ ಕಂಪನ ಹಾಗೂ ಶರೀರ ಆವಯವಗಳ ಪಾಠಗಳ ಹಾಗೂ ಸಂಸ್ಕೃತ ವಿಶ್ವವಿದ್ಯಾಲಯ ಪ್ರಾರಂಭಿಸುವುದು. ಸಾಣಾಪುರ ಕೆರೆ ಹತ್ತಿರ ನೀರಿನ ವಿಭಿನ್ನ ವಿನ್ಯಾಸಗಳನ್ನು ಮಾಡುವ ಲೇಸರ್‌ ಶೋ ಮಾಡುವುದು. ಒಟ್ಟಾರೆ ಅಂಜನಾದ್ರಿ ಬೆಟ್ಟದಲ್ಲಿ ಪ್ರವಾಸಿಗರಿಗೆ ಅಗತ್ಯವಿರುವ ಎಲ್ಲ ಅನುಕೂಲಗಳನ್ನು ಕಲ್ಪಿಸಿಕೊಡಲು ನಿರ್ಧರಿಸಲಾಯಿತು.
 


Stay up to date on all the latest ರಾಜ್ಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp