ಬೆಂಗಳೂರಿನಲ್ಲಿ ಸಾವಿರ ಗಡಿ ದಾಟಿದ ಕೊರೋನಾ: ರಾಜ್ಯದಲ್ಲಿ 1,587 ಜನರಿಗೆ ಪಾಸಿಟಿವ್, 10 ಸಾವು!

ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಹೆಚ್ಚುತ್ತಿದ್ದು, ಶುಕ್ರವಾರ 1,587 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,66,689ಕ್ಕೆ ಏರಿಕೆಯಾಗಿದೆ.

Published: 19th March 2021 07:37 PM  |   Last Updated: 19th March 2021 07:37 PM   |  A+A-


Covid-19

ಕೊರೋನಾ ವೈರಸ್

Posted By : Vishwanath S
Source : Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಹೆಚ್ಚುತ್ತಿದ್ದು, ಶುಕ್ರವಾರ 1,587 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,66,689ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಹತ್ತು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,425ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1,037 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,15,447ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಆರು ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 869 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,42,178ಕ್ಕೆ ಏರಿಕೆಯಾಗಿದೆ. ಇನ್ನು 12,067 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 131 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Stay up to date on all the latest ರಾಜ್ಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp