ಎಫ್ಐ ಆರ್ ಪ್ರಶ್ನಿಸಿ ಕಂಗನಾ ಅರ್ಜಿ: ತುಮಕೂರು ಪೊಲೀಸರಿಗೆ ಹೈಕೋರ್ಟ್ ನೊಟೀಸ್

ರೈತರ ಪ್ರತಿಭಟನೆ ವಿಷಯವಾಗಿ ಟ್ವೀಟ್ ಮಾಡಿದ್ದಕ್ಕೆ ಕಂಗನಾ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಹೈಕೋರ್ಟ್ ಕರ್ನಾಟಕ ಪೊಲೀಸರಿಗೆ ನೊಟೀಸ್ ಜಾರಿಗೊಳಿಸಿದೆ.

Published: 19th March 2021 09:09 PM  |   Last Updated: 20th March 2021 12:58 PM   |  A+A-


kangana ranaut

ಕಂಗನಾ ರಣಾವತ್

Posted By : Srinivas Rao BV
Source : The New Indian Express

ಬೆಂಗಳೂರು: ರೈತರ ಪ್ರತಿಭಟನೆ ವಿಷಯವಾಗಿ ಟ್ವೀಟ್ ಮಾಡಿದ್ದಕ್ಕೆ ಕಂಗನಾ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಹೈಕೋರ್ಟ್ ಕರ್ನಾಟಕ ಪೊಲೀಸರಿಗೆ ನೊಟೀಸ್ ಜಾರಿಗೊಳಿಸಿದೆ.
 
ಕಂಗಾನ ಟ್ವೀಟ್ ವಿರುದ್ಧ ತುಮಕೂರಿನ ವಕೀಲರೊಬ್ಬರು ಕಂಗನಾ ವಿರುದ್ಧ ಸಮಾಜದಲ್ಲಿ ಶಾಂತಿ ಕದಡುವ ಆರೋಪ ಹೊರಿಸಿ ತನಿಖೆಗೆ ಆಗ್ರಹಿಸಿ ದೂರು ದಾಖಲಿಸಿದ್ದರು. ತುಮಕೂರಿನ ಜೆಎಂಎಫ್ ಸಿ ನ್ಯಾಯಾಲಯ ದೂರಿನ ಆಧಾರದಲ್ಲಿ ಕಂಗನಾ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಅವಕಾಶ ನೀಡಿತ್ತು. 
 
ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಲು ಅನುಮತಿ ನೀಡಿರುವ ಆದೇಶವನ್ನು ಪ್ರಶ್ನಿಸಿ ಕಂಗನಾ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. 

ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಹೆಚ್ ಪಿ ಸಂದೇಶ್ ತುಮಕೂರಿನ ಕ್ಯಾತಸಂದ್ರ ಪೊಲೀಸರು ಹಾಗೂ ಅಡ್ವೊಕೇಟ್ ರಮೇಶ್ ನಾಯ್ಕ್ ಅವರಿಗೆ ನೊಟೀಸ್ ಜಾರಿಗೊಳಿಸಿದೆ. ಇದೇ ವೇಳೆ ಬಂಧನದಿಂದ ರಕ್ಷಣೆ ಕೋರಿದ್ದ ಕಂಗನಾ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮಾ.25 ಕ್ಕೆ ಮುಂದೂಡಿದೆ.


Stay up to date on all the latest ರಾಜ್ಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp