ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದಿದ್ದರೆ ಶಾಲೆ, ಕಾಲೇಜು ಬಂದ್: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಕೊರೋನಾ ಸೋಂಕು ಇದೇ ರೀತಿ ಏರಿಕೆಯಾಗುತ್ತಲೇ ಇದ್ದರೆ ಶಾಲೆ, ಕಾಲೇಜು ಬಂದ್ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ. 

Published: 21st March 2021 10:19 AM  |   Last Updated: 21st March 2021 10:19 AM   |  A+A-


yeddyurappa

ಸಿಎಂ ಯಡಿಯೂರಪ್ಪ

Posted By : Manjula VN
Source : The New Indian Express

ತುಮಕೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇದೇ ರೀತಿ ಏರಿಕೆಯಾಗುತ್ತಲೇ ಇದ್ದರೆ ಶಾಲೆ, ಕಾಲೇಜು ಬಂದ್ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ. 

ತಿಪಟೂರಿನಲ್ಲಿ ಮಿನಿ ವಿಧಾನಸೌಧ, ನಗರ ಸಭೆ ಕಚೇರಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಕಟ್ಟಡಗಳ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು, ಶಾಲಾ ಕಾಲೇಜು ಬಂದ್ ಮಾಡುವ ಯೋಜನೆ ಇಲ್ಲ. ಒಂದು ವಾರ ನೋಡಿ ಬಳಿಕ ಪರಿಸ್ಥಿತಿ ಸುಧಾರಿಸದೇ ಇದ್ದರೆ ಕೋವಿಡ್ ಸಂಖ್ಯೆ ಹೆಚ್ಚುತ್ತಲೇ ಇದ್ದರೆ, ಪರಿಸ್ಥಿತಿ ನೋಡಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 

ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಕಾರ್ಯಕ್ರಮಗಳಿಗೆ ಷರತ್ತು ಹಾಕಿದ್ದೇವೆ ವಿನಃ ಸಾರ್ವಜನಿಕ ಸಭೆಗಳಿಗೆ ಅಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಎಚ್ಚರಿಕೆಯಿಂದ ಕಾರ್ಯಕ್ರಮ ಮಾಡಬಹುದು ಎಂದು ತಿಳಿಸಿದ್ದಾರೆ. 

ಇದೇ ವೇಳೆ ಕೊರೋನಾ ಹಣ ದುರುಪಯೋಗವಾಗಿದೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಅವರು. ದುರುಪಯೋಗ ಆಗಿದೆ ಎಂದು ಹೇಳುವುದು ಬಹಳ ಸುಲಭ. ಆದರೆ, ಸಾಕ್ಷ್ಯಾಧಾರವಿಲ್ಲದೆ ಈ ರೀತಿ ಆರೋಪ ಮಾಡುವುದು ವಿರೋಧ ಪಕ್ಷದ ನಾಯಕರಿಗೆ ಶೋಭೆಯಲ್ಲ. ವಿಧಾನಮಂಡಲದಲ್ಲಿ ಕೋವಿಡ್ ಖರ್ಚಿನ ವಿವರ ಕೊಟ್ಟಿರುವುದಾಗಿ ತಿಳಿಸಿದರು. ಕೋವಿಡ್ ಮರುಕಳಿಸುತ್ತಾ ಇದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಲಸಿಕೆ ತೆಗೆದುಕೊಳ್ಳಿ ಎಂದು ಮನವಿ ಮಾಡಿಕೊಂಡರು. 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp