ಬೆಳಗಾವಿ ಉಪಚುನಾವಣೆ: ಟಿಕೆಟ್ ನೀಡುವಂತೆ ಪ್ರಧಾನಿ ಮೋದಿ, ಅಮಿತ್ ಶಾಗೆ ಪ್ರಮೋದ್ ಮುತಾಲಿಕ್ ಪತ್ರ

ಏಪ್ರಿಲ್ 17 ರಂದು ಬೆಳಗಾವಿಯಲ್ಲಿ ನಡೆಯುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಲು ಟಿಕೆಟ್ ನೀಡುವಂತೆ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ.

Published: 24th March 2021 08:20 AM  |   Last Updated: 24th March 2021 08:51 AM   |  A+A-


Sri Rama Sene chief Pramod Muthalik

ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್

Posted By : Manjula VN
Source : The New Indian Express

ಬೆಂಗಳೂರು: ಏಪ್ರಿಲ್ 17 ರಂದು ಬೆಳಗಾವಿಯಲ್ಲಿ ನಡೆಯುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಲು ಟಿಕೆಟ್ ನೀಡುವಂತೆ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ.

ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಛಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡುವಂತೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಜೆಡಿ ನಡ್ಡಾ ಅವರಿಗೆ ಪತ್ರ ಬರೆದಿದ್ದೇನೆಂದು ಹೇಳಿದ್ದಾರೆ.

ಸಂಸದ ಸುರೇಶ್ ಅಂಗಡಿ ಅವರು ಸೆಪ್ಟೆಂಬರ್ ತಿಂಗಳಿನಲ್ಲಿ ವಿಧಿವಶರಾಗಿದ್ದರು. ಸುರೇಶ್ ಅಂಗಡಿ ಸಾವಿನ ಬಳಿಕ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಏ.17ರಂದು ಉಪಚುನಾವಣೆ ನಡೆಯಲಿದೆ.

ಮುತಾಲಿಕ್ ಅವರು ಬಿಜೆಪಿ ಮತ್ತು ಸಂಘ ಪರಿವಾರದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದು. ಸಾಕಷ್ಟು ಅಧ್ಯಯನದ ಬಳಿಕ ಆರ್‌ಎಸ್‌ಎಸ್‌ನ ಸದಸ್ಯರಾಗಿದ್ದರು. ಆರ್‌ಎಸ್‌ಎಸ್‌ನಿಂದ ದೂರಾದ ಬಳಿಕ 2006 ರಲ್ಲಿ ಶ್ರೀ ರಾಮ ಸೇನೆ ಸ್ಥಾಪಿಸಿದ್ದರು. 2014 ರಲ್ಲಿ ಧಾರವಾಡ ಲೋಕಸಭಾ ಸ್ಥಾನಕ್ಕೆ ಬಿಜೆಪಿಯ ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧಿಸಿದ್ದ ಅವರು, ಚುನಾವಣೆಯಲ್ಲಿ ಕೇವಲ 5,000 ಮತಗಳನ್ನು ಗಳಿಸಿದ್ದರು.

Stay up to date on all the latest ರಾಜ್ಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp