ಕಲಬುರಗಿಯಲ್ಲಿ ರಸ್ತೆ ಅಪಘಾತ: ಆರೋಗ್ಯ ಕೇಂದ್ರದ ಮಹಿಳಾ ಅಧಿಕಾರಿ ಸಾವು

ಕೆಲಸ ಮುಗಿಸಿ ಮರಳುತ್ತಿದ್ದ ವೇಳೆ ಎತ್ತಿನ ಗಾಡಿಗೆ ಸ್ಕೂಟಿ ಡಿಕ್ಕಿಯಾದ ಪರಿಣಾಮ ಆರೋಗ್ಯ ಕೇಂದ್ರದ ಮಹಿಳಾ ಅಧಿಕಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಹೊರವಲಯದಲ್ಲಿ ನಡೆದಿದೆ.

Published: 26th March 2021 11:50 AM  |   Last Updated: 26th March 2021 11:54 AM   |  A+A-


ಕನ್ಯಾಕುಮಾರಿ

Posted By : Raghavendra Adiga
Source : Online Desk

ಕಲಬುರಗಿ: ಕೆಲಸ ಮುಗಿಸಿ ಮರಳುತ್ತಿದ್ದ ವೇಳೆ ಎತ್ತಿನ ಗಾಡಿಗೆ ಸ್ಕೂಟಿ ಡಿಕ್ಕಿಯಾದ ಪರಿಣಾಮ ಆರೋಗ್ಯ ಕೇಂದ್ರದ ಮಹಿಳಾ ಅಧಿಕಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಹೊರವಲಯದಲ್ಲಿ ನಡೆದಿದೆ.

ಮೃತರನ್ನು ಕನ್ಯಾಕುಮಾರಿ ಎಂದು ಗುರುತಿಸಲಾಗಿದ್ದು ಈಕೆ ಕಮಲಾಪೂರ ತಾಲೂಕಿನ ಕಿಣ್ಣಿ ಸಡಕ್ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಯಾಗಿದ್ದರು.

ಕೆಲಸ ಮುಗಿಸಿ ಕಲಬುರಗಿಗೆ ಬರುವಾಗ ಎತ್ತಿನಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಕನ್ಯಾಕುಮಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಗಳ ಸಾವಿನಿಂದಾಗಿ ಮೃತರ ಕುಟುಂಬದ ಶೋಕ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp