ಬಿಬಿಎಂಪಿ ಮುಂಗಡ ಪತ್ರ: ಜನಸ್ನೇಹಿ ಹಾಗೂ ಜನರ ಮೇಲೆ ಹೊರೆ ಇಲ್ಲದ ಬಜೆಟ್‌ ಎಂದ ಡಿಸಿಎಂ

ಕೋವಿಡ್‌ ಸಂಕಷ್ಟ ಕಾಲದಲ್ಲೂ ಜನರ ಮೇಲೆ ಯಾವುದೇ ರೀತಿಯ ತೆರಿಗೆ ವಿಧಿಸದ ಬೃಹತ್‌ ಬೆಂಗಳೂರು ಮಮಹಾನಗರ ಪಾಲಿಕೆ (ಬಿಬಿಎಂಪಿ) ಬಜೆಟ್‌ ಜನಪರ ಮತ್ತು ಜನಸ್ನೇಹಿ ಬಜೆಟ್‌ ಆಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದ್ದಾರೆ.

Published: 28th March 2021 08:10 AM  |   Last Updated: 28th March 2021 02:24 PM   |  A+A-


ashwath narayan

ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ

Posted By : Manjula VN
Source : Online Desk

ಬೆಂಗಳೂರು: ಕೋವಿಡ್‌ ಸಂಕಷ್ಟ ಕಾಲದಲ್ಲೂ ಜನರ ಮೇಲೆ ಯಾವುದೇ ರೀತಿಯ ತೆರಿಗೆ ವಿಧಿಸದ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಜೆಟ್‌ ಜನಪರ ಮತ್ತು ಜನಸ್ನೇಹಿ ಬಜೆಟ್‌ ಆಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದ್ದಾರೆ.

ಬಿಬಿಎಂಪಿ ಬಜೆಟ್‌ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿರುವ ಅವರು, ಕೋವಿಡ್‌ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಜನರಿಗೆ ಯಾವುದೇ ಹೊರೆ ಹೇರಲಾಗಿಲ್ಲ. ಬದಲಿಗೆ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದರು.

ಬಜೆಟ್‌ನಲ್ಲಿ ನಗರದ ಎಲ್ಲ ವಾರ್ಡುಗಳಿಗೆ, ವಲಯಗಳಿಗೆ ಸಮಾನ ಪ್ರಾಮುಖ್ಯತೆ ಕೊಡಲಾಗಿದೆ. ಮುಖ್ಯವಾಗಿ ನಗರದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಿಬಿಎಂಪಿ ಕಾಯ್ದೆಯನ್ನು ಸರಕಾರ ಜಾರಿಗೆ ತಂದಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರು ಜಾಗತಿಕ ಮಟ್ಟದಲ್ಲಿ ಅತ್ಯಂತ ಉತ್ತಮ ನಗರವಾಗಿ ಹೊರಹೊಮ್ಮಲಿದೆ. ಅದಕ್ಕೆ ಅಗತ್ಯವಾದ ಎಲ್ಲ ಉಪಕ್ರಮಗಳನ್ನು ಬಜೆಟ್‌ನಲ್ಲಿ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.


Stay up to date on all the latest ರಾಜ್ಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp