ರಮೇಶ್ ಜಾರಕಿಹೊಳಿ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಎರಡನೇ ದಿನವೂ ಮುಂದುವರೆದ ಪ್ರತಿಭಟನೆ

ಸಿಡಿ ರಾಸಲೀಲೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಅನ್ವಯ ಕೂಡಲೇ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಇಂದೂ ಕೂಡ ಪ್ರತಿಭಟನೆ ಮುಂದುವರೆಸಿತು.

Published: 28th March 2021 01:41 PM  |   Last Updated: 28th March 2021 01:41 PM   |  A+A-


ramesh jarkiholi

ರಮೇಶ್ ಜಾರಕಿಹೊಳಿ

Posted By : Srinivasamurthy VN
Source : UNI

ಬೆಂಗಳೂರು: ಸಿಡಿ ರಾಸಲೀಲೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಅನ್ವಯ ಕೂಡಲೇ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಇಂದೂ ಕೂಡ ಪ್ರತಿಭಟನೆ ಮುಂದುವರೆಸಿತು.

ರಮೇಶ್ ಜಾರಕಿಹೊಳಿ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಈವರೆಗೆ ಅವರನ್ನು ಪೊಲೀಸರು ಬಂಧಿಸುವ ಪ್ರಯತ್ನ ಮಾಡಿಲ್ಲ. ವಿಚಾರಣೆಗೂ ಒಳಪಡಿಸಿಲ್ಲ ಆದ್ದರಿಂದ ನ್ಯಾಯ ಸಿಗುವ ಸಾಧ್ಯತೆ ಕಡಿಮೆ ಇರುವುದರಿಂದ ಮಹಿಳೆಗೆ ಸೂಕ್ತ ರಕ್ಷಣೆ ಸಿಗುತ್ತಿಲ್ಲ ಮಾಧ್ಯಮಗಳ ಮುಂದೆ ವೀರಾವೇಶವಾಗಿ ಮಾತನಾಡಿರುವ ರಮೇಶ್ ಜಾರಕಿಹೊಳಿ ನಕಲಿ ಸೀಡಿ ಎಂದ ಮೇಲೆ ಯುವತಿಯನ್ನ ಹೆಸರನ್ನು ಪ್ರಸ್ತಾಪಿಸುವ ಅವಶ್ಯಕತೆ ಏಕೆ ಬಂತು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

ಶನಿವಾರ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಇಂದು ಮನೋಹರ್ ನೇತ್ವತ್ವದ ತಂಡ ಪ್ರತಿಭಟನೆ ನಡೆಸಿತು.


Stay up to date on all the latest ರಾಜ್ಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp