ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಲ್ಲಿ ಪೊಲೀಸ್ ಪೇದೆ ಸಾವು

ದ್ವಿಚಕ್ರ ವಾಹನಕ್ಕೆ ಕೆಎಸ್ ಆರ್ ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಪೇದೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ತಾಲೂಕಿನ ಬಸರಾಳು ಬಳಿ ಸಂಭವಿಸಿದೆ.

Published: 28th March 2021 03:55 PM  |   Last Updated: 28th March 2021 03:59 PM   |  A+A-


Venkatesh-Accident

ಮೃತ ಪೇದೆ ವೆಂಕಟೇಶ್

Posted By : Vishwanath S
Source : UNI

ಮಂಡ್ಯ: ದ್ವಿಚಕ್ರ ವಾಹನಕ್ಕೆ ಕೆಎಸ್ ಆರ್ ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಪೇದೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ತಾಲೂಕಿನ ಬಸರಾಳು ಬಳಿ ಸಂಭವಿಸಿದೆ.

50 ವರ್ಷದ ವೆಂಕಟೇಶ್ ಮೃತ ಪೊಲೀಸ್  ಪೇದೆ. ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿದ್ದ ವೆಂಕಟೇಶ್ ಅವರು ರಾತ್ರಿ ಚುಂಚನಗಿರಿಯ ಜಾತ್ರೆಯ ಕರ್ತವ್ಯ ಮುಗಿಸಿ ವಾಪಸ್ಸು ಬರುವಾಗಿ ಅಪಘಾತ ಸಂಭವಿಸಿದೆ. 

ಅಪಘಾತ ಸ್ಥಳಕ್ಕೆ ಬರಸಾಳು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.


Stay up to date on all the latest ರಾಜ್ಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp