ಮಂಗಳೂರು: ಒಳ ಉಡುಪಿನಲ್ಲಿಟ್ಟು ಸಾಗಿಸುತ್ತಿದ್ದ ಅಂದಾಜು 40 ಲಕ್ಷ ಮೌಲ್ಯದ ಬಂಗಾರ ವಶ, ದಂಪತಿ ಅರೆಸ್ಟ್
ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳುಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಚಿನ್ನ ಕಳ್ಳಸಾಗಣೆ ಮಾಡುವ ಮತ್ತೊಂದು ಪ್ರಯತ್ನವನ್ನು ವಿಫಲಗೊಳಿಸಿದ್ದು ದಂಪತಿಗಳನ್ನು ಬಂಧಿಸಿದ್ದಾರೆ.
Published: 28th March 2021 02:49 PM | Last Updated: 28th March 2021 02:49 PM | A+A A-

ವಶಕ್ಕೆ ಪಡೆದ ಚಿನ್ನ
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಚಿನ್ನ ಕಳ್ಳಸಾಗಣೆ ಮಾಡುವ ಮತ್ತೊಂದು ಪ್ರಯತ್ನವನ್ನು ವಿಫಲಗೊಳಿಸಿದ್ದು ದಂಪತಿಗಳನ್ನು ಬಂಧಿಸಿದ್ದಾರೆ.
ಶನಿವಾರ ಸಂಜೆ ಕಾಸರಗೋಡು ಜಿಲ್ಲೆಯ ಚೇರೂರು ಗ್ರಾಮದ ಫೌಸಿಯಾ ಮಿಸ್ರಿಯಾ ಮೊಯ್ದೀನ್ ಕುಂಞಿ (33) ಮತ್ತು ಆಕೆಯ ಪತಿಯನ್ನು ಚಿನ್ನದ ಕಳ್ಳಸಾಗಣೆ ಆರೋಪದ ಮೇಲೆ ಬಂಧಿಸಲಾಗಿದೆ. ಈಕೆ ಪತಿ ಹಾಗೂ ನಾಲ್ವರು ಮಕ್ಕಳೊಂದಿಗೆ ದುಬೈನಿಂದ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದಳು.
ಮಹಿಳೆಯು ವಿಶೇಷವಾಗಿ ವಿನ್ಯಾಸಗೊಳಿಸಿದ್ದ ಒಳ ಉಡುಪಿನಲ್ಲಿ ಚಿನ್ನವನ್ನು ಮುಚ್ಚಿಟ್ಟು ಸಾಗಿಸಲು ಯತ್ನಿಸಿದ್ದಳು.
ಆರೋಪಿಯಿಂದ 39.48 ಲಕ್ಷ ಮೌಲ್ಯದ851 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಹೇಳಿದ್ದಾರೆ.