ಕೋವಿಡ್-19 ವಿರುದ್ಧ ಹೋರಾಟದಲ್ಲಿ ಕರ್ನಾಟಕ ಮುಂದು: ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಹಾಕಿಸಿಕೊಂಡ ಹಿರಿಯ ನಾಗರಿಕರು!

60 ವರ್ಷ ಮೇಲ್ಪಟ್ಟ 16 ಲಕ್ಷದ 41 ಸಾವಿರದ 201 ಮಂದಿ ನಿನ್ನೆ ಮಾರ್ಚ್ 27ರ ಹೊತ್ತಿಗೆ ಕರ್ನಾಟಕದಲ್ಲಿ ಕೋವಿಡ್-19 ಲಸಿಕೆ ಪಡೆದಿದ್ದು, ಅತ್ಯಂತ ಹೆಚ್ಚು ಕೋವಿಡ್-19 ಲಸಿಕೆ ಗುರಿಯನ್ನು ತಲುಪಲಾಗಿದೆ.

Published: 29th March 2021 01:03 PM  |   Last Updated: 29th March 2021 01:49 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Sumana Upadhyaya
Source : The New Indian Express

ಬೆಂಗಳೂರು: 60 ವರ್ಷ ಮೇಲ್ಪಟ್ಟ 16 ಲಕ್ಷದ 41 ಸಾವಿರದ 201 ಮಂದಿ ನಿನ್ನೆ ಮಾರ್ಚ್ 27ರ ಹೊತ್ತಿಗೆ ಕರ್ನಾಟಕದಲ್ಲಿ ಕೋವಿಡ್-19 ಲಸಿಕೆ ಪಡೆದಿದ್ದು, ಅತ್ಯಂತ ಹೆಚ್ಚು ಕೋವಿಡ್-19 ಲಸಿಕೆ ಗುರಿಯನ್ನು ತಲುಪಲಾಗಿದೆ.

ಆರೋಗ್ಯ ಸೇವೆ ಕಾರ್ಯಕರ್ತರು ಕೋವಿಡ್-19 ಲಸಿಕೆ ಪಡೆದವರಲ್ಲಿ ಎರಡನೇ ಸ್ಥಾನದಲ್ಲಿದ್ದು ಮೊದಲ  ಹಂತದಲ್ಲಿ 5 ಲಕ್ಷದ 47 ಸಾವಿರದ 370 ಮಂದಿ ಮೊದಲ ಡೋಸ್ ಪಡೆದುಕೊಂಡಿದ್ದು ಎರಡನೇ ಸ್ಥಾನದಲ್ಲಿದ್ದಾರೆ.

ಮೂರನೇ ಹಂತದಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್, 45 ವರ್ಷಕ್ಕಿಂತ ಮೇಲ್ಪಟ್ಟ ಸುಮಾರು 16 ಲಕ್ಷ ಮಂದಿ ಕೋವಿಡ್ ಲಸಿಕೆ ಪಡೆಯಬಹುದು ಎಂದು ಅಂದಾಜಿಸಿದ್ದು ಅವರಲ್ಲಿ ಶೇಕಡಾ 30.10 ಮಂದಿ ಮೊದಲ ಡೋಸ್ ಪಡೆದಿದ್ದಾರೆ.

ಈ ಮಧ್ಯೆ, ಕೋವಿಡ್ ಮುಂಚೂಣಿ ಕಾರ್ಯಕರ್ತರು ಕಡಿಮೆ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಂಡಿದ್ದು 2 ಕೋಟಿಗೂ ಅಧಿಕ ಮಂದಿಗೆ ಲಸಿಕೆ ನೀಡಬೇಕೆಂದು ಹಾಕಲಾಗಿರುವ ಗುರಿಯಲ್ಲಿ ಶೇಕಡಾ 1.11ರಷ್ಟು ಗುರಿ ಸಾಧಿಸಲಾಗಿದೆ. 

 ಆರೋಗ್ಯಸೇವೆ ಕಾರ್ಯಕರ್ತರು, ವೈದ್ಯರು, ನರ್ಸ್ ಗಳು, ಗ್ರೂಪ್ ಡಿ ನೌಕರರು, ಆಶಾ ಕಾರ್ಯಕರ್ತರು ಮತ್ತು ಅಂಗನವಾಡಿ ಸಿಬ್ಬಂದಿಯಲ್ಲಿ ಕೋವಿಡ್-19 ಲಸಿಕೆ ಪಡೆಯುವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ ಶ್ರೀನಿವಾಸ್ ಗುಲೂರು ತಿಳಿಸಿದ್ದಾರೆ.

60 ವರ್ಷಕ್ಕಿಂತ ಮೇಲ್ಪಟ್ಟ ವಿದ್ಯಾವಂತರು ಸರ್ಕಾರಿ ಮತ್ತು ಖಾಸಗಿ ಕೇಂದ್ರಗಳಲ್ಲಿ ಲಸಿಕೆ ಹಾಕಿಸಿಕೊಳ್ಳುತ್ತಾರೆ, ಆದರೆ ಗ್ರಾಮೀಣ ಪ್ರದೇಶದಲ್ಲಿ ಜನರು ಅಷ್ಟೊಂದು ಆಸಕ್ತಿ ಹೊಂದಿಲ್ಲ. ನಾವು ಅವರನ್ನು ಒತ್ತಾಯಿಸಲು ಸಾಧ್ಯವಿಲ್ಲ. ನಮ್ಮ ಮಾಹಿತಿ ಶಿಕ್ಷಣ ಮತ್ತು ಸಂವಹನ (ಐಇಸಿ) ಅಭಿಯಾನದ ಹೊರತಾಗಿಯೂ, 45 ವರ್ಷಕ್ಕಿಂತ ಮೇಲ್ಪಟ್ಟ ಆರೋಗ್ಯ ಸಮಸ್ಯೆ ಇರುವವರಲ್ಲಿ ಲಸಿಕೆ ಬಗ್ಗೆ ಅರಿವಿನ ಕೊರತೆಯಿದೆ ಎನ್ನುತ್ತಾರೆ ಅವರು.

ಬೆಂಗಳೂರು ಮತ್ತು ಬಾಗಲಕೋಟೆ ರಾಜ್ಯದಲ್ಲಿ ಉತ್ತಮ ಲಸಿಕೆ ನೀಡಿದ ಪ್ರಮುಖ ಜಿಲ್ಲೆಗಳಾಗಿವೆ. ಲಸಿಕೆ ಬಗ್ಗೆ ತಪ್ಪು ಗ್ರಹಿಕೆ, ಅದರ ಅಡ್ಡ ಪರಿಣಾಮ ಬಗ್ಗೆ ಭಯವೇ ಲಸಿಕೆ ಪಡೆಯಲು ನಿರಾಸಕ್ತಿ ಹೊಂದುವುದಕ್ಕೆ ಕಾರಣವಾಗಿದೆ ಎನ್ನಲಾಗಿದೆ. 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp