ಆರೋಗ್ಯ ಕ್ಷೇತ್ರದಲ್ಲಿ ವೈಭವ ತರಬೇಕಿದೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್

ವಿಜಯನಗರ ಸಾಮ್ರಾಜ್ಯದಲ್ಲಿ ಸೃಷ್ಟಿಯಾಗಿದ್ದ ವೈಭವದಂತೆ ಆರೋಗ್ಯ ಕ್ಷೇತ್ರದಲ್ಲೂ ವೈಭವ ತರಬೇಕಿದೆ. ಇದಕ್ಕಾಗಿ ಆಸ್ಪತ್ರೆಗಳ ಮೂಲಸೌಕರ್ಯ ಹೆಚ್ಚಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

Published: 30th March 2021 08:03 PM  |   Last Updated: 31st March 2021 12:59 PM   |  A+A-


Sudhakar

ಸುಧಾಕರ್

Posted By : Srinivas Rao BV
Source : Online Desk

ವಿಜಯನಗರ: ವಿಜಯನಗರ ಸಾಮ್ರಾಜ್ಯದಲ್ಲಿ ಸೃಷ್ಟಿಯಾಗಿದ್ದ ವೈಭವದಂತೆ ಆರೋಗ್ಯ ಕ್ಷೇತ್ರದಲ್ಲೂ ವೈಭವ ತರಬೇಕಿದೆ. ಇದಕ್ಕಾಗಿ ಆಸ್ಪತ್ರೆಗಳ ಮೂಲಸೌಕರ್ಯ ಹೆಚ್ಚಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿವಿಧ ಮೂಲಸೌಕರ್ಯವನ್ನು ಉದ್ಘಾಟನೆ ಹಾಗೂ ಕಾಮಗಾರಿ ಚಾಲನೆ ಕಾರ್ಯಕ್ರಮದಲ್ಲಿ ಉಡುಪಿಯಿಂದ ವರ್ಚುವಲ್ ಆಗಿ ಪಾಲ್ಗೊಂಡು ಸಚಿವರು ಮಾತನಾಡಿದರು. 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಿದ್ದಾರೆ. ಮೂರು ಹಂತಗಳ ಆರೋಗ್ಯ ಸೇವೆಯನ್ನು ಬಲಪಡಿಸಲಾಗುತ್ತಿದೆ. ಪಿಎಚ್ ಸಿಗಳಿಗೆ ಆಧುನಿಕ ಸ್ಪರ್ಶ ನೀಡಲಾಗುತ್ತಿದೆ. ರೋಗಗಳ ಬಂದ ನಂತರ ಔಷಧಿ ನೀಡುವುದಕ್ಕಿಂತ ಮುಂಚಿತವಾಗಿ ರೋಗ ಬಾರದಂತೆ ಮಾಡುವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ವೈದ್ಯರು ಕೆಲಸ ಮಾಡುವುದನ್ನು ಉತ್ತೇಜಿಸಲು ಕಾನೂನುಗಳಲ್ಲಿ ಬದಲಾವಣೆ ತರಲಾಗುತ್ತಿದೆ. ಹಳ್ಳಿಗಳಲ್ಲಿ ಹೆಚ್ಚು ಜನರು ವಾಸಿಸುತ್ತಿದ್ದು, ವೈದ್ಯರ ಸೇವೆ ಅಗತ್ಯ ಎಂದರು.

ರಾಜ್ಯದ ನಾಲ್ಕು ಕಡೆಗಳಲ್ಲಿ ಈಗಾಗಲೇ ವೈದ್ಯಕೀಯ ಕಾಲೇಜು ನಿರ್ಮಾಣ ಆರಂಭವಾಗಿದೆ. ದೇಶದಲ್ಲಿ 157 ಮೆಡಿಕಲ್ ಕಾಲೇಜುಗಳ ನಿರ್ಮಾಣವಾಗುತ್ತಿದೆ. ಇದು ಪೂರ್ಣವಾದರೆ ಸುಮಾರು 27 ಸಾವಿರ ವಿದ್ಯಾರ್ಥಿಗಳಿಗೆ ವ್ಯಾಸಂಗದ ಅವಕಾಶ ಸಿಗಲಿದೆ. ಇದಕ್ಕೆ ಪೂರಕವಾಗಿ ರಾಜ್ಯದಲ್ಲಿ 2 ಸಾವಿರಕ್ಕೂ ಅಧಿಕ ವೈದ್ಯರ ನೇರ ನೇಮಕ ನಡೆಯುತ್ತಿದೆ ಎಂದರು.

Stay up to date on all the latest ರಾಜ್ಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp