ಚಾಲಕ ಆತ್ಮಹತ್ಯೆ: ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆ ಸ್ಥಗಿತ; ಪ್ರತಿಭಟನೆ, 50 ಲಕ್ಷ ರೂ. ಪರಿಹಾರಕ್ಕೆ ಒತ್ತಾಯ

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಪ್ರಾಧಿಕಾರದ ಚಾಲಕ ಮಂಗಳವಾರ ಸಂಜೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಪ್ರಯತ್ನಪಟ್ಟಿದ್ದು ಬುಧವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Published: 31st March 2021 04:30 PM  |   Last Updated: 31st March 2021 06:02 PM   |  A+A-


Kempegowda International airport

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

Posted By : Lingaraj Badiger
Source : UNI

ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಪ್ರಾಧಿಕಾರದ ಚಾಲಕ ಮಂಗಳವಾರ ಸಂಜೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಪ್ರಯತ್ನಪಟ್ಟಿದ್ದು ಬುಧವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಇತರೆ ಟ್ಯಾಕ್ಸಿ ಚಾಲಕರು ಇಂದು ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.

ಟ್ಯಾಕ್ಸಿಗಳು ದಿಢೀರ್ ಸ್ಥಗಿತವಾಗಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಟ್ಯಾಕ್ಸಿ ಸೇವೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ತೆರಳುವ ವಾಯುವಜ್ರ ಬಸ್ ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಅಲ್ಲದೆ ಪ್ರಯಾಣಿಕರ ಅನುಕೂಲಕ್ಕಾಗಿ ಟ್ಯಾಕ್ಸಿ ಸ್ಟ್ಯಾಂಡ್ ನಿಂದಲೇ ಬಸ್ ಗಳನ್ನು ನಿಯೋಜನೆ ಮಾಡಲಾಗಿದೆ.

ಒಂದು ಕಿ.ಮೀ.ಗೆ 24 ರೂ. ದರ ನಿಗದಿ ಮಾಡಿ ಚಾಲಕರ ಜೀವ ಉಳಿಸಿ ಎಂದು ಒತ್ತಾಯಿಸಿ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇನ್ನೂ ಚಾಲಕನ ಆತ್ಮಹತ್ಯೆ ವಿಷಾದನೀಯ ಎಂದಿರುವ ರಾಷ್ಟ್ರೀಯ ಚಾಲಕರ ಒಕ್ಕೂಟ, ಮೃತನ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂಪಾಯಿ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದೆ.

ಕೊರೋನಾದಿಂದ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿಂದೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಅನೇಕ ಬಾರಿ ಚಾಲಕ ಸಂಘಟನೆಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆಗಳು, ಮನವಿಗಳು, ಮಾಡಿದ್ದರೂ ಸಹ ಸಾರಿಗೆ ಇಲಾಖೆಯ ನಿರ್ಲಕ್ಷ ಧೋರಣೆಯಿಂದ ಚಾಲಕರು ಆತ್ಮಹತ್ಯೆಗೆ ಕಾರಣವಾಗುತ್ತಿದೆ ಎಂದು ಆರೋಪಿಸಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರ ಚಾಲಕರ ಬೇಡಿಕೆಗಳಿಗೆ ಸ್ಪಂದಿಸಿದಲ್ಲಿ ಸಾವಿನ ಸಂಖ್ಯೆ ದಿನೇದಿನೇ ಹೆಚ್ಚಾಗುವ ಸಾಧ್ಯತೆ ಇದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಚಾಲಕರ ಸಂಕಷ್ಟಕ್ಕೆ ಪರಿಹಾರ ಒದಗಿಸಿ ಕೊಡಬೇಕು ಎಂದು ಹೇಳಿದೆ. 

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಚಾಲಕರ ಒಕ್ಕೂಟದ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ, ಬ್ಯಾಂಕುಗಳಿಗೆ ಕಂತು ಕಟ್ಟುವ ವಿಷಯದಲ್ಲಿ ದಬ್ಬಾಳಿಕೆ ಮಾಡದಂತೆ ಓಲಾ ಉಬರ್ ಸಂಸ್ಥೆಯಲ್ಲಿ ಚಾಲಕರಿಗೆ ನೀಡುತ್ತಿರುವ ಕಿರುಕುಳ ತಪ್ಪಿಸಬೇಕು. ಸರ್ಕಾರ ಹಳದಿ ಬೋರ್ಡ್ ವಾಹನಗಳಿಗೆ ತೆರಿಗೆಯಲ್ಲಿ ವಿನಾಯಿತಿ ನೀಡಿ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ವಿಚಾರದಲ್ಲಿ ಆಗುತ್ತಿರುವ ದೌರ್ಜನ್ಯ ತಪ್ಪಿಸಬೇಕು ಎಂದು ಹೇಳಿದ್ದಾರೆ. 

ಸತತ ಲಾಕ್ ಡೌನ್ ನಿಂದ ಖಾಸಗಿ ಫೈನಾನ್ಸ್ ರ್ ಗಳ ಕಿರುಕುಳದಿಂದ ಸಾಕಷ್ಟು ಚಾಲಕರು ತೊಂದರೆಗೀಡಾಗಿದ್ದಾರೆ. ಈ ಬಗ್ಗೆ ಸರಕಾರದ ಗಮನಕ್ಕೆ ತಂದರೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಇದೇ ರೀತಿ ಚಾಲಕರ ಮೇಲಿನ ಬೇಜವಾಬ್ದಾರಿತನ ಮುಂದುವರೆದರೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp