ಮಾಜಿ ಪ್ರಧಾನಿ ದೇವೇಗೌಡ, ಪತ್ನಿ ಚೆನ್ನಮ್ಮಗೆ ಕೊರೋನಾ ಸೋಂಕು

ಮಾಜಿ ಪ್ರಧಾನಿ ಎಚ್.ಡಿ..ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.. ಕುಟುಂಬದಿಂದ ದೂರವಾಗಿ ಇಬ್ಬರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೇವೇಗೌಡ ದಂಪತಿ
ದೇವೇಗೌಡ ದಂಪತಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ..ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.. ಕುಟುಂಬದಿಂದ ದೂರವಾಗಿ ಇಬ್ಬರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಸಂಬಂಧ ದೇವೇಗೌಡ ಅವರು ತಮ್ಮ ಟ್ವೀಟ್ ಮೂಲಕ ಮಾಹಿತಿ ತಿಳಿಸಿದ್ದಾರೆ.

"ನನ್ನ ಪತ್ನಿ ಚೆನ್ನಮ್ಮಮತ್ತು ನಾನು ಕೋವಿಡ್-19 ಪಾಸಿಟಿವ್ ವರದಿ ಪಡೆದಿದ್ದೇವೆ. ನಾವು ಇತರ ಕುಟುಂಬ ಸದಸ್ಯರೊಂದಿಗೆ ಸ್ವಯಂ-ಪ್ರತ್ಯೇಕತೆಯಲ್ಲಿದ್ದೇವೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಅಲ್ಲದೆ "ಕಳೆದ ಕೆಲವು ದಿನಗಳಿಂದ ನಮ್ಮೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ತಮ್ಮನ್ನು ತಾವು ಪರೀಕ್ಷಿಸಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳು ಭಯಭೀತರಾಗಬೇಕಾದ ಅಗತ್ಯವಿಲ್ಲ ಎಂದು ನಾನು ಈ ಮೂಲಕ ಸ್ಪಷ್ಟಪಡಿಸುತ್ತೇನೆ" ಎಂದೂ ದೇವೇಗೌಡರು ಹೇಳಿದ್ದಾರೆ.

ನಿನ್ನೆ ತಾನೇ ಜಮ್ಮು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಈ ಸಂಬಂಧ ಟ್ವೀಟ್ ಮಾಡಿದ್ದ ಜೆಡಿಎಸ್ ಮುಖಂಡ ಫಾರೂಕ್ ಅಬ್ದುಲ್ಲಾ ಬೇಗನೇ ಗುಣಮುಖವಾಗಲಿ ಎಂದು ಹಾರೈಸಿದ್ದರು.

ಶೀಘ್ರವಾಗಿ ಗುಣಮುಖರಾಗಲಿ ಎಂದ ಆರೋಗ್ಯ ಸಚಿವ ಸುಧಾಕರ್

ಮಾಜಿ ಪ್ರಧಾನಿ ದೇವೇಗೌಡ ಹಾಗೂ ಅವರ ಪತ್ನಿಗೆ ಕೊರೋನಾ ಸೋಂಕು ದ್ರೂಢವಾಗಿರುವ ಹಿನ್ನೆಲೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ "ಅವರು ಶೀಘ್ರ ಗುಣಮುಖವಾಗಲೆಂದು" ಹಾರೈಸಿದ್ದಾರೆ.

"ಹಿರಿಯರು, ಮಾಜಿ ಪ್ರಧಾನಿಗಳಾದ ಶ್ರೀ ಎಚ್.ಡಿ.ದೇವೇಗೌಡರು ಹಾಗೂ ಅವರ ಧರ್ಮಪತ್ನಿ ಅವರಿಗೆ ಕೊರೊನಾ ಸೋಂಕು ಧೃಢಪಟ್ಟಿರುವ ಸುದ್ದಿ ತಿಳಿಯಿತು. 

"ವೈದ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಅವರ ಆರೋಗ್ಯದ ಬಗ್ಗೆ ಖುದ್ದಾಗಿ ಮಾಹಿತಿ ಪಡೆಯಲಿದ್ದೇನೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಸುಧಾಕರ್ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com