ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ: ಸಂತ್ರಸ್ತ ಯುವತಿಯ ವೈದ್ಯಕೀಯ ಪರೀಕ್ಷೆ ಮುಕ್ತಾಯ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣದ ಸಂತ್ರಸ್ತ ಯುವತಿಯನ್ನು ಎಸ್ಐಟಿ ಅಧಿಕಾರಿಗಳು ಬುಧವಾರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

Published: 31st March 2021 03:58 PM  |   Last Updated: 31st March 2021 03:58 PM   |  A+A-


woman

ಸಂತ್ರಸ್ತ ಯುವತಿ

Posted By : Lingaraj Badiger
Source : UNI

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣದ ಸಂತ್ರಸ್ತ ಯುವತಿಯನ್ನು ಎಸ್ಐಟಿ ಅಧಿಕಾರಿಗಳು ಬುಧವಾರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ಇಂದು ಬೆಳಗ್ಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯರಿಂದ ಸಂತ್ರಸ್ತ ಯುವತಿಗೆ ಮೆಡಿಕಲ್​ ಪರೀಕ್ಷೆ ಮಾಡಲಾಯಿತು. 

ಸುಮಾರು 1 ಗಂಟೆಗಳ ಕಾಲ ಯುವತಿಯನ್ನು ಕೋವಿಡ್ -19 ಪರೀಕ್ಷೆ, ಬಿಪಿ, ಶುಗರ್ ಸೇರಿ ಹಲವು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಯುವತಿ ವೈದ್ಯಕೀಯ ಪರೀಕ್ಷೆ ಮುಕ್ತಾಯಗೊಂಡಿದ್ದು, ಹೆಚ್ಚಿನ ವಿಚಾರಣೆಗಾಗಿ ಎಸ್ಐಟಿ ಕರೆದೊಯ್ಯುಲಿದ್ದಾರೆ.

ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕರೆತಂದ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆಯ ಮುಂಭಾಗ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಸ್ಥಳದಲ್ಲಿ ಸುಮಾರು 20ಕ್ಕೂ ಹೆಚ್ಚು ಜನ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಈ ವೇಳೆ ಎಸ್ಐಟಿ ತನಿಖಾಧಿಕಾರಿ ಕವಿತಾ ಕೂಡ ಉಪಸ್ಥಿತರಿದ್ದರು.


Stay up to date on all the latest ರಾಜ್ಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp