ರಾಜ್ಯದಲ್ಲಿ ಕೊರೋನಾ ಅಬ್ಬರ: ಇಂದು 271 ಮಂದಿ ಬಲಿ, 40,990 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ ಮುಂದುವರೆದಿದ್ದು ಇಂದು ದಾಖಲೆಯ 40,990 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 15,64,132ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ ಮುಂದುವರೆದಿದ್ದು ಇಂದು ದಾಖಲೆಯ 40,990 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 15,64,132ಕ್ಕೆ ಏರಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 271 ಮಂದಿ ಸೋಂಕಿಗೆ ಬಲಿಯಾಗಿದ್ದು ಇದರೊಂದಿಗೆ ಸಾವಿನ ಸಂಖ್ಯೆ 15,794ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 19,353 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 7,76,093ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 162 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 18,341 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 11,43,250ಕ್ಕೆ ಏರಿಕೆಯಾಗಿದೆ. ಇನ್ನು 4,05,068 ಸಕ್ರೀಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com