ಬೆಂಗಳೂರು: ಕೊಡಿಗೆಹಳ್ಳಿ ಠಾಣೆ ಎಎಸ್ ಐ ಕೊರೋನಾಗೆ ಬಲಿ

ಕೊಡಿಗೆಹಳ್ಳಿ ಠಾಣೆ ವ್ಯಾಪ್ತಿಯ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಕೊರೋನಾಗೆ ಬಲಿಯಾಗಿದ್ದಾರೆ.
ನಂಜಪ್ಪ
ನಂಜಪ್ಪ

ಬೆಂಗಳೂರು: ಕೊಡಿಗೆಹಳ್ಳಿ ಠಾಣೆ ವ್ಯಾಪ್ತಿಯ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಕೊರೋನಾಗೆ ಬಲಿಯಾಗಿದ್ದಾರೆ.

ಎಎಸ್ ಐ ನಂಜಪ್ಪ (57) ಕೊರೋನಾದಿಂದ ಸಾವನ್ನಪ್ಪಿದ್ದಾರೆ,. ಕೊರೋನಾ ವಾರಿಯರ್ ಆಗಿ ಕೆಲಸ ಮಾಡುತ್ತಿದ್ದ ಅವರು ಕೋವಿಡಿ ನೀತಿ ನಿಯಮ ಸರಿಯಾಗಿ ಪಾಲನೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವ ಸಮಯದಲ್ಲಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ದೇವನಹಳ್ಳಿಯ ಆಕಾಶ್ ಆಸ್ಪತ್ರೆಯಲ್ಲಿ ಬೆಳಗ್ಗೆ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ಮೂರು ದಶಕಗಳಿಂದಲೂ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಅವರನ್ನು ಉಳಿಸಿಕೊಳ್ಳಲು ನಾವು ಎಲ್ಲಾ ರೀತಿಯ ಪ್ರಯತ್ನ ಮಾಡಿದೆವು, ಆದರೆ ಫಲ ನೀಡಲಿಲ್ಲ, ಅವರ ಸಾವು ನಮಗೆಲ್ಲಾ ಆಘಾತ ತಂದಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ  ಸಿ.ಕೆ ಬಾಬಾ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com