ಲಸಿಕೆಗೆ ಹೆಚ್ಚು ಹಣ ಕೇಳುವ ಆಸ್ಪತ್ರೆಗಳ ವಿರುದ್ಧ ಕ್ರಮ: 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ

18 ವರ್ಷ ಮೇಲ್ಪಟ್ಟ ವಯಸ್ಕರಿಗೆ ಕೋವಿಡ್ ಸೋಂಕಿನಿಂದ ರಕ್ಷಿಸಿಕೊಳ್ಳಲು ಲಸಿಕೆ ಹಾಕಿಸಿಕೊಳ್ಳುವ 4ನೇ ಹಂತದ ಲಸಿಕಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಶನಿವಾರ ಸಾಂಕೇತಿಕವಾಗಿ ಚಾಲನೆ ನೀಡಿದರು.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು 18 ವರ್ಷ ಮೇಲ್ಪಟ್ಟವರಿಗೆ  ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಬೌರಿಂಗ್ ಆಸ್ಪತ್ರೆಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದರು.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಬೌರಿಂಗ್ ಆಸ್ಪತ್ರೆಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದರು.

ಬೆಂಗಳೂರು: 18 ವರ್ಷ ಮೇಲ್ಪಟ್ಟ ವಯಸ್ಕರಿಗೆ ಕೋವಿಡ್ ಸೋಂಕಿನಿಂದ ರಕ್ಷಿಸಿಕೊಳ್ಳಲು ಲಸಿಕೆ ಹಾಕಿಸಿಕೊಳ್ಳುವ 4ನೇ ಹಂತದ ಲಸಿಕಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಶನಿವಾರ ಸಾಂಕೇತಿಕವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೋವಿಡ್ ರೋಗಿಗಳಿಗೆ ನೀಡುವ ರೆಮೆಡಿಸಿವಿರ್ ಹಾಗೂ ಬೇರೆ ಔಷಧಿಗಳನ್ನು ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೋವಿಡ್-19 ನ ಎರಡನೇ ಅಲೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೆಚ್ಚಾಗಿದೆ. ಈ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಜನರಿಂದ ಖಾಸಗಿ ಆಸ್ಪತ್ರೆಗಳು ಮನಸೋ ಇಚ್ಛೆ ಹಣ ವಸೂಲಿ ಮಾಡಿದರೆ, ಸರಿಯಾದ ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕೂಡ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಲಸಿಕೆಗೆ ದರ ನಿಗದಿ ಮಾಡಲಾಗಿದೆ. ಜನರು ಕೊರೋನಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಆದಷ್ಟು ಬೇಗನೆ ಸೋಂಕು ನಮ್ಮ ರಾಜ್ಯ ಮತ್ತು ದೇಶದಿಂದ ತೊಲಗಿ ಹೋಗಲು ಮನಸ್ಸು ಮಾಡಬೇಕು. ಕೇಂದ್ರ ಸರ್ಕಾರದಿಂದ 3 ಲಕ್ಷ ಲಸಿಕೆ ಲಭ್ಯವಾಗಿದ್ದು ನಮ್ಮ ಬಳಿ ಒಂದು ಲಕ್ಷ ಲಭ್ಯವಿದೆ. ಎರಡು ದೇಶೀಯ ಲಸಿಕೆ ಲಭ್ಯವಿದೆ.ಈ ತಿಂಗಳಲ್ಲಿ ಇನ್ನೊಂದು ಲಸಿಕೆ ಬರಲಿದೆ. ಶೀಘ್ರವೇ ಎಲ್ಲವೂ ಸರಿಹೋಗಿ ಎಲ್ಲರಿಗೂ ಲಸಿಕೆ ಲಭ್ಯವಾಗುತ್ತದೆ ಎಂದು ಭರವಸೆ ನೀಡಿದರು.

ಕೇಂದ್ರ ಸರ್ಕಾರದಿಂದ 3 ಲಕ್ಷ ಲಸಿಕೆ ಲಭ್ಯವಾಗಿದ್ದು ನಮ್ಮ ಬಳಿ ಒಂದು ಲಕ್ಷ ಲಭ್ಯವಿದೆ. ಎರಡು ದೇಶೀಯ ಲಸಿಕೆ ಲಭ್ಯವಿದೆ.ಈ ತಿಂಗಳಲ್ಲಿ ಇನ್ನೊಂದು ಲಸಿಕೆ ಬರಲಿದೆ. 2 ಕೋಟಿ ಲಸಿಕೆ ಖರೀದಿಗೆ ಹಣ ನೀಡಲಾಗಿದ್ದು 3.56 ಕೋಟಿ ಜನರಿಗೆ ಲಸಿಕೆ ನೀಡುವ ಉದ್ದೇಶವಿದೆ. ಲಸಿಕೆಗೆ ಸೇವಾ ಶುಲ್ಕ 100 ರೂಪಾಯಿ ನಿಗದಿ ಮಾಡಲಾಗಿದ್ದು 100 ರೂಪಾಯಿಗಿಂತ ಹೆಚ್ಚು ಹಣ ಪಡೆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸೆರಂ ಇನ್ಸ್ಟಿಟ್ಯೂಟ್ ನಿಂದ 1 ಕೋಟಿ ಡೋಸ್ ಲಸಿಕೆಗೆ ಸರ್ಕಾರ ಆದೇಶ ನೀಡಿದ್ದು ಅದಿನ್ನೂ ಬರಬೇಕಿರುವುದರಿಂದ ರಾಜ್ಯದಲ್ಲಿ ಇನ್ನೂ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಅಭಿಯಾನ ಆರಂಭವಾಗಿಲ್ಲ, ಇಂದು ಕೇವಲ ಸಾಂಕೇತಿಕವಾಗಿ ಚಾಲನೆ ನೀಡಲಾಗಿದೆಯಷ್ಟೆ. 

ಮೊದಲು ಸಿಕ್ಕಿದ್ದು ನಮ್ಮ ಪುಣ್ಯ: ಇಂದು ಮೊದಲ ದಿನ ಲಸಿಕೆ ಹಾಕಿಸಿಕೊಂಡ 26 ವರ್ಷದ ಯುವತಿ ಪೂಜಾ ಮಾತನಾಡಿ, 18 ವರ್ಷದ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ಹಾಕಿಸಿಕೊಳ್ಳುವ ಕಾರ್ಯಕ್ರಮದಲ್ಲಿ ನನಗೆ ಮೊದಲ ದಿನ ಲಸಿಕೆ ಸಿಕ್ಕಿರುವುದು ನನ್ನ ಅದೃಷ್ಟ, ಮುಂದಿನ ದಿನಗಳಲ್ಲಿ ಆದಷ್ಟು ಬೇಗನೆ ಎಲ್ಲರಿಗೂ ಲಸಿಕೆ ಸಿಗಬಹುದೆಂದು ಭಾವಿಸುತ್ತೇನೆ, ಈ ಮೂಲಕ ಎಲ್ಲರೂ ಲಸಿಕೆ ಪಡೆದು ಕೊರೋನಾ ಮಹಾಮಾರಿಯನ್ನು ತೊಲಗಿಸೋಣ ಎಂದರು.

24 ವರ್ಷದ ಮೊನಿಷ್ ಎಂಬ ಯುವಕ ಮಾತನಾಡಿ, ವಯಸ್ಕರಿಗೆ ನೀಡುವ ಲಸಿಕೆ ಅಭಿಯಾನದಲ್ಲಿ ನನಗೆ ಮತ್ತು ನನ್ನ ಸೋದರಿ ಪೂಜಾಗೆ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗಿದೆ.ಈ ಅಭಿಯಾನದಲ್ಲಿ ಎಲ್ಲರೂ ಸಕ್ರಿಯರಾಗಿ ಪಾಲ್ಗೊಂಡು ಲಸಿಕೆ ಹಾಕಿಸಿಕೊಂಡು ಸುರಕ್ಷಿತವಾಗಿರಿ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com