ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ ಮಾಡಿದಲ್ಲಿ ಜೈಲಿಗೆ: ಸಚಿವ ಡಾ. ಸುಧಾಕರ್

ಕೋವಿಡ್ ಸೋಂಕಿತರ  ಚಿಕಿತ್ಸೆಗಾಗಿ ನೀಡಲಾಗುವ ರೆಮಿಡಿಸಿವಿರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡಿದಲ್ಲಿ ಅಂಥವರ ವಿರುದ್ಧ ಎಫ್.ಐ.ಆರ್. ದಾಖಲಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಕಳ್ಳ ಮಾರಾಟಗಾರರಿಗೆ ಎಚ್ಚರಿಸಿದ್ದಾರೆ.
ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಕಲಬುರಗಿ: ಕೋವಿಡ್ ಸೋಂಕಿತರ  ಚಿಕಿತ್ಸೆಗಾಗಿ ನೀಡಲಾಗುವ ರೆಮಿಡಿಸಿವಿರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡಿದಲ್ಲಿ ಅಂಥವರ ವಿರುದ್ಧ ಎಫ್.ಐ.ಆರ್. ದಾಖಲಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಕಳ್ಳ ಮಾರಾಟಗಾರರಿಗೆ ಎಚ್ಚರಿಸಿದ್ದಾರೆ.

ಶನಿವಾರ ನಗರದ ಜಿಲ್ಲಾ ಪಂಚಾಯಿತಿ ನೂತನ  ಸಭಾಂಗಣದಲ್ಲಿ ಸುದ್ದಿ ಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೊರೊನಾ ಪೀಡಿತರಿಗೆ ಚಿಕಿತ್ಸೆಗೆ ಇತ್ತೀಚೆಗೆ ರೆಮಿಡಿಸಿವಿರ್ ಬಳಕೆಗೆ ಭಾರಿ ಬೇಡಿಕೆ ಬಂದಿದೆ. ಇದನ್ನೇ ಕೆಲವರು ದುರ್ಬಳಕೆ ಮಾಡಿಕೊಂಡು ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಇಂತಹ ಪ್ರಕರಣದಲ್ಲಿ ಯಾರಾದರು ಸಿಲುಕಿಕೊಂಡರೆ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಇದರ ಮಾಫಿಯಾದ ಇಡೀ ಜಾಲವನ್ನು ಜಾಲಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ಇನ್ನು, ಖಾಸಗಿ ಆಸ್ಪತ್ರೆಗಳು ಸಹ ಕೋವಿಡ್ ರೋಗಿಗೆ ಅಗತ್ಯವಿದ್ದಲ್ಲಿ ಮಾತ್ರ ರೆಮಿಡಸಿವಿರ್ ಇಂಜೆಕ್ಷನ್ ನೀಡಲು ಬೇಡಿಕೆ ಸಲ್ಲಿಸಬೇಕು. ಅದರಂತೆ ಬಳಕೆ ಮಾಡಿ ಬಳಕೆ ಪ್ರಮಾಣ ಪತ್ರ ಸಲ್ಲಿಸಬೇಕು. ಒಂದು ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ತೆಗೆದುಕೊಂಡು ಆಸ್ಪತ್ರೆಯ ಯಾವುದೇ ಸಿಬ್ಬಂದಿ ದುರ್ಬಳಕೆ ಮಾಡಿಕೊಂಡಲ್ಲಿ ಅಂತಹ ಆಸ್ಪತ್ರೆಗಳ ಲೈಸೆನ್ಸ್ ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಳೆದ ವರ್ಷ ರಾಜ್ಯದಲ್ಲಿ 11 ಲಕ್ಷ ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಆದರೆ, ಯಾರೊಬ್ಬರಿಗೂ ರೆಮಿಡಿಸಿವಿರ್ ಇಂಜೆಕ್ಷನ್ ನೀಡಿಲ್ಲ ಎಂಬುದನ್ನು ಆಸ್ಪತ್ರೆಗಳು ಮತ್ತು ರೋಗಿಗಳು ಅರಿಯಬೇಕು ಎಂದರು. ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿದ್ದರಿಂದ ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಕಾಣಿಸಿಕೊಂಡಿದೆ. ಕಲಬುರಗಿ ನಗರದಲ್ಲಿಯೇ 4 ವೈದ್ಯಕೀಯ ಕಾಲೇಜುಗಳಿದ್ದು, ಇದು ಸಮಾಧಾನದ ಸಂಗತಿಯಾಗಿದೆ. ಕಾಲೇಜುಗಳ ಶೇ.75ರಷ್ಟು ಹಾಸಿಗೆಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲಿಡಬೇಕು. ಈ ನಿಟ್ಟಿನಲ್ಲಿ ತಮ್ಮ ವಶಕ್ಕೆ ಪಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು. 

ಜಿಲ್ಲೆಯ ಸಂಸದರು, ಶಾಸಕರು ಒಳಗೊಂಡಂತೆ ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ಇಂದು ಕೋವಿಡ್ ಪರಿಸ್ಥಿತಿ ಕುರಿತು ಸಮಗ್ರವಾಗಿ ಸಭೆ ನಡೆಸಿದ್ದೇನೆ. ಕೆಲವು ನ್ಯೂನತೆಗಳಿದ್ದು, ಇದನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು. ರಾಜ್ಯದಲ್ಲಿ ಕೋವಿಡ್ ಸೋಂಕಿನ ಸರಪಳಿಯನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಮೇ12ರ ವೆರೆಗ ಕೋವಿಡ್ ಕಫ್ರ್ಯೂ ಜಾರಿಗೊಳಿಸಲಾಗಿದೆ. ಇದನ್ನು ಕಲಬುರಗಿ ಜಿಲ್ಲೆಯಲ್ಲಿಯೂ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಪೊಲೀಸ್ ಆಯುಕ್ತರು ಮತ್ತು ಎಸ್.ಪಿ. ಅವರಿಗೆ ಸೂಚಿಸಿದ್ದೇನೆ ಎಂದರು.

ರೋಗದ ಲಕ್ಷಣವಿಲ್ಲದ ಕೋವಿಡ್ ಸೋಂಕಿತರು ಸಹ ಆಕ್ಸಿಜನ್, ರೆಮಿಡಿಸಿವಿರ್ ಇಂಜೆಕ್ಷನ್ ಬೇಡಿಕೆಗೆ ಬೇಡಿಕೆ ಆಗ್ರಹಿಸುತ್ತಿರುವುದು ಇವುಗಳ ತೀವ್ರ ಅಭಾವಕ್ಕೆ ಕಾರಣವಾಗಿದೆ. ಹೋಮ ಇಸೋಲೇಶನ್ ನಲ್ಲಿರುವ ಸೋಂಕಿತರಿಗೆ ಮೆಡಿಕಲ್ ಕಿಟ್ ನೀಡಲು ಸೂಚಿಸಿದ್ದೇನೆ ಹಾಗೂ ನಗರ ಮತ್ತು ಗ್ರಾಮೀಣ ಭಾಗದಲ್ಲಿರುವ ಅವರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಲು ಸಮಾಲೋಚನೆಗಾಗಿ ಮನೆಗೆ ಭೇಟಿ ನೀಡಿ ಅವರಲ್ಲಿ ಆತ್ಮಸ್ಥೈರ್ಯ ತುಂಬುವಂಥ ಸೂಚಿಸಿದ್ದೇನೆ. ಒಟ್ಟಾರೆ ಸೋಂಕಿತ ಪ್ರಮಾಣದಲ್ಲಿ ರಾಜ್ಯದಲ್ಲಿ ಶೇಕಡ ಜೀರೋ ಪಾಯಿಂಟ್ ಝೀರೋ ಸಿಕ್ಸ್ ಹಣವಿದ್ದರೆ ಕಲಬುರ್ಗಿ ಜಿಲ್ಲೆಯಲ್ಲಿ ಪಾಯಿಂಟ್ಸ್ 95 ಕಳೆದ ವರ್ಷ ಇದರ ಪ್ರಮಾಣ ಶೇಕಡ 1.3 ರಷ್ಟಿತ್ತು ಎಂದು ವಿವರಿಸಿದರು.

ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ತೇಲ್ಕೂರ, ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಮತ್ತಿತರರು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com