ಸೋಂಕಿತರ ಅಸಹಾಯಕತೆಯ ದುರುಪಯೋಗ ಬೇಡ: ಖಾಸಗಿ ಆಸ್ಪತ್ರೆಗಳಿಗೆ ಸಚಿವ ಜಗದೀಶ್ ಶೆಟ್ಟರ್

ಸೋಂಕಿತರ ಅಸಹಾಯಕತೆಯ ದುರುಪಯೋಗ ಮಾಡಿಕೊಂಡು ವೈದ್ಯ ವೃತ್ತಿಗೆ ಕಪ್ಪು ಚುಕ್ಕೆ ತರಬೇಡಿ ಎಂದು ಖಾಸಗಿ ಆಸ್ಪತ್ರೆಗಳಿಗೆ ಸಚಿವ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಹೇಳಿದ್ದಾರೆ. 
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಸೋಂಕಿತರ ಅಸಹಾಯಕತೆಯ ದುರುಪಯೋಗ ಮಾಡಿಕೊಂಡು ವೈದ್ಯ ವೃತ್ತಿಗೆ ಕಪ್ಪು ಚುಕ್ಕೆ ತರಬೇಡಿ ಎಂದು ಖಾಸಗಿ ಆಸ್ಪತ್ರೆಗಳಿಗೆ ಸಚಿವ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಹೇಳಿದ್ದಾರೆ. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲೆಯ ಖಾಸಗಿ ಆಸ್ಪತ್ರೆ ಮುಖ್ಯಸ್ಥರ ಹಾಗೂ ಖಾಸಗಿ ಆಸ್ಪತ್ರಗೆಳಿಗೆ ನೇಮಕಗೊಂಡಿರುವ ನೋಡೆಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್-19ರ ಸೋಂಕು ಹೆಚ್ಚಾಗುತ್ತಿದ್ದಂತೆಯೇ ಬಹಳಷ್ಟು ಜನ ತೊಂದರೆಗಳಿಗೆ ಸಿಲುಕಿದ್ದಾರೆ. ಕೆಲವರು ನೇರವಾಗಿ ಆಸ್ಪತ್ರೆಗೆ ದಾಖಲಾಗಿ ವೆಚ್ಚ ಭರಿಸಲು ಕಷ್ಟಪಡುತ್ತಿದ್ದಾರೆ. ಅಂತಹವ ನೆರವಿಗಾಗಿ ಸರ್ಕಾರವು ಉಚಿತ ಚಿಕಿತ್ಸೆ ಹಾಗೂ ಇತರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಆದರೆ, ಆಸ್ಪತ್ರೆಗಳು ಸರ್ಕಾರ ನಿಗದಿಗೊಳಿಸಿರುವ ದರಕ್ಕಿಂತ ಹೆಚ್ಚು ಮೊತ್ತ ಪಾವತಿಸುವಂತೆ ಕೋವಿಡ್ ಸೋಂಕಿತರಿಗೆ ಹಾಗೂ ಅವರ ಕುಟುಂಬದವರಿಗೆ ಒತ್ತಡ ಹೇರಿ, ಈ ಅಸಹಾಯಕತೆಯ ದುರುಪಯೋಗ ಮಾಡಿಕೊಳ್ಳಬಾರದು ಎಂದು ಹೇಳಿದ್ದಾರೆ. 

ಕೋವಿಡ್ ಸೋಂಕು ಹೆಚ್ಚುತ್ತಿರುವ ಈ ಬಿಕ್ಕಿಟ್ಟಿನ ಸಂದರ್ಭದಲ್ಲಿ ವೈದ್ಯ ಮಿತ್ರರು ಬಡವರಿಗೆ, ಅಸಾಯಕರಿಗೆ ನೆರವಾಗಿ ವೃತ್ತಿ ನಿರ್ವಹಿಸಬೇಕು. ಸರ್ಕಾರವು ಕೈಗೊಂಡಿರುವ ಕ್ರಮಗಳಿಗೆ ಸಹಕಾರ ನೀಡಿ ವೃತ್ತಿಗೌರವ ಹೆಚ್ಚಿಸಬೇಕು ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com