ಬೆಳಗಾವಿ: ತರಕಾರಿ ಬೆಳೆಗಾರರ ಬದುಕು ಛಿದ್ರಗೊಳಿಸಿದ ಕೋವಿಡ್ 19

ದೀರ್ಘಕಾಲೀನ ಕೊರೋನಾ ಬಿಕ್ಕಟ್ಟಿನಿಂದಾಗಿ ಹೇರಳವಾಗಿ ತರಕಾರಿ ಬೆಳೆಯುತ್ತಿದ್ದ ರೈತರನ್ನು ಸಂಕಷ್ಟಕ್ಕೆ ದೂಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ:  ದೀರ್ಘಕಾಲೀನ ಕೊರೋನಾ ಬಿಕ್ಕಟ್ಟಿನಿಂದಾಗಿ ಹೇರಳವಾಗಿ ತರಕಾರಿ ಬೆಳೆಯುತ್ತಿದ್ದ ರೈತರನ್ನು ಸಂಕಷ್ಟಕ್ಕೆ ದೂಡಿದೆ.

ಕೋವಿಡ್ ನಿರ್ಬಂಧಗಳಿಂದಾಗಿ ಗೋವಾ ಮತ್ತು ಮಹಾರಾಷ್ಟ್ರಕ್ಕೆ ನಿಯಮಿತವಾಗಿ ಸಾಗಣೆಯಾಗುತ್ತಿದ್ದ ತರಕಾರಿಗಳು ಸ್ಥಗಿತಗೊಂಡಿವೆ.

ಮೇ 12ರ ವರೆಗೆ ಸರ್ಕಾರ ಲಾಕ್ ಡೌನ್ ವಿಧಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ರೈತರು ವ್ಯಾಪಕವಾಗಿ ತರಕಾರಿ ತರುತ್ತಿದ್ದಾರೆ, ಆದರೆ ಕೊಳ್ಳುವವರ ಸಂಖ್ಯೆ ಅಧಿಕವಾಗಿಲ್ಲ.

ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ರೈತರಿಗೆ ಪ್ರತಿದಿನ ಬೆಳಿಗ್ಗೆ 6 ರಿಂದ 10 ರವರೆಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸೌಲಭ್ಯಗಳನ್ನು ಒದಗಿಸಲಾಗಿದ್ದರೂ, ಸಮಯದ ಮೇಲಿನ ನಿರ್ಬಂಧಗಳು ವಹಿವಾಟಿಗೆ ಅಡ್ಡಿಯಾಗುತ್ತಿದೆ. ಹಲವಾರು ಸಣ್ಣ-ಸಮಯದ ಖರೀದಿದಾರರು ರೈತರ ಉತ್ಪನ್ನಗಳೊಂದಿಗೆ ವ್ಯವಹರಿಸುತ್ತಿದ್ದಾರೆ ಆದರೆ ಯಾವುದೇ ಸಗಟು ವ್ಯಾಪಾರಿಗಳು ಬೆಳಿಗ್ಗೆ ಲಭ್ಯವಿರುವ ನಾಲ್ಕು ಗಂಟೆಗಳ ಸಮಯಗಳಲ್ಲಿ ವಿವಿಧ ಕಾರಣಗಳಿಂದ ತರಕಾರಿಗಳನ್ನು ಖರೀದಿಸುತ್ತಿಲ್ಲ ಎಂದು  ರೈತ ಅನಿಲ್ ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಎಪಿಎಂಸಿ ಮಾರುಕಟ್ಟೆಯಲ್ಲಿ ಹೆಚ್ಚಿನ ಪ್ರಮಾಣದ ತರಕಾರಿಗಳು ಮಾರಾಟವಾಗದ ಕಾರಣ ರೈತರು ಆತಂಕಕ್ಕೊಳಗಾಗಿದ್ದಾರೆ.  ಹೆಚ್ಚಿನ ತರಕಾರಿಗಳ ಬೆಲೆ ತೀವ್ರವಾಗಿ ಕುಸಿದಿದೆ. ಬೆಂಡೆಕಾಯಿ, ಹೂಕೋಸು, ಕ್ಯಾಪ್ಸಿಕಂ, ಆಲೂಗಡ್ಡೆ, ಟೊಮೆಟೊ, ಬೀನ್ಸ್, ಕ್ಯಾರೆಟ್, ಸೌತೆಕಾಯಿ ಮುಂತಾದ ತರಕಾರಿಗಳನ್ನು ಬೆಳಗಾವಿಯ ಹಲವಾರು ಭಾಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಲಾಗುತ್ತಿದೆ ಎಂದು ರೈತರು ತಿಳಿಸಿದ್ದಾರೆ.

ಕಳೆದ ಒಂದು ವರ್ಷದಿಂದ ತಮ್ಮ ಉತ್ಪನ್ನಗಳನ್ನು ಪರಿಣಾಮಕಾರಿಯಾಗಿ ಮಾರಾಟ ಮಾಡಲು ಸಾಧ್ಯವಾಗದ ಕಾರಣ ರೈತರ ಜೀವನವನ್ನು ಬಿಕ್ಕಟ್ಟಿಗೆ ಸಿಲುಕಿಸಿದೆ. "ಕಳೆದ ವರ್ಷ ಲಾಕ್ ಡೌನ್ ಆದ ಕಾರಣ ನಾವೆಲ್ಲರೂ ಸಾಕಷ್ಟು ತೊಂದರೆ ಅನುಭವಿಸಿದ್ದೇವೆ, ಸ್ವಲ್ಪು ದಿನ ರೈತರು ಉತ್ತಮ ವ್ಯವಹಾರ ಮಾಡಿದರು ಕೋವಿಡ್ ಎರಡನೇ ಅಲೆಯಲ್ಲಿ ಈಗ ಪರಿಸ್ಥಿತಿ ಪುನರಾವರ್ತನೆಯಾಗಿದೆ ಎಂದು ರೈತರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com