ಮುರುಗೇಶ್ ನಿರಾಣಿಗೆ ಕಲಬುರಗಿ, ಗೋವಿಂದ ಕಾರಜೋಳಗೆ ಬೆಳಗಾವಿ ಸೇರಿ ಹಲವು ಸಚಿವರಿಗೆ ಹೊಸ ಜಿಲ್ಲೆಗಳ ಉಸ್ತುವಾರಿ 

ಕೋವಿಡ್ ಸೋಂಕಿನಿಂದ ರಾಜ್ಯ ನಲುಗಿ ಹೋಗಿರುವ ಸಂದರ್ಭದಲ್ಲಿ ಮತ್ತು ಉಪ ಚುನಾವಣೆ ಫಲಿತಾಂಶ ಮಧ್ಯೆ ಉಪ ಮುಖ್ಯಮಂತ್ರಿ ಹಾಗೂ ಕೆಲವು ಸಚಿವರುಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿರುವ ಹೆಸರುಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

Published: 02nd May 2021 01:05 PM  |   Last Updated: 02nd May 2021 01:26 PM   |  A+A-


Posted By : Sumana Upadhyaya
Source : The New Indian Express

ಬೆಂಗಳೂರು: ಕೋವಿಡ್ ಸೋಂಕಿನಿಂದ ರಾಜ್ಯ ನಲುಗಿ ಹೋಗಿರುವ ಸಂದರ್ಭದಲ್ಲಿ ಮತ್ತು ಉಪ ಚುನಾವಣೆ ಫಲಿತಾಂಶ ಮಧ್ಯೆ ಉಪ ಮುಖ್ಯಮಂತ್ರಿ ಹಾಗೂ ಕೆಲವು ಸಚಿವರುಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿರುವ ಹೆಸರುಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಅದರಂತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಬೆಳಗಾವಿ, ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಉಮೇಶ್ ಕತ್ತಿ ಅವರಿಗೆ ಬಾಗಲಕೋಟೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿಯವರಿಗೆ ಬೀದರ್ ಜಿಲ್ಲೆ, ಪೌರಾಡಳಿತ ಸಚಿವ ಎಂ ಟಿ ಬಿ ನಾಗರಾಜ್ ಅವರಿಗೆ ಕೋಲಾರ, ಗಣಿ ಇಲಾಖೆ ಸಚಿವ ಮುರುಗೇಶ್ ನಿರಾಣಿ ಅವರಿಗೆ ಕಲಬುರಗಿ ಮತ್ತು ಮೀನುಗಾರಿಕೆ ಇಲಾಖೆ ಸಚಿವ ಎಸ್ ಅಂಗಾರ ಅವರಿಗೆ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನವನ್ನು ನೀಡಿ ಆದೇಶ ಹೊರಡಿಸಲಾಗಿದೆ. 


Stay up to date on all the latest ರಾಜ್ಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp