ಕರ್ನಾಟಕ ಉಪಚುನಾವಣಾ ಕದನ: ಮತ ಎಣಿಕೆ ಪ್ರಕ್ರಿಯೆ ಆರಂಭ

ಮಹಾಮಾರಿ ಕೊರೋನಾ ಸೋಂಕು ಆತಂಕದ ನಡುವಲ್ಲೂ ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಿಗ್ಗೆ 8ರಿಂದ ಆರಂಭವಾಗಿದೆ. 
ಬಸವಕಲ್ಯಾಣ ಕ್ಷೇತ್ರದಲ್ಲಿ ಮತಎಣಿಕೆ ಕೇಂದ್ರದಲ್ಲಿರುವ ಸಿಬ್ಬಂದಿಗಳು
ಬಸವಕಲ್ಯಾಣ ಕ್ಷೇತ್ರದಲ್ಲಿ ಮತಎಣಿಕೆ ಕೇಂದ್ರದಲ್ಲಿರುವ ಸಿಬ್ಬಂದಿಗಳು

ಬೆಂಗಳೂರು: ಮಹಾಮಾರಿ ಕೊರೋನಾ ಸೋಂಕು ಆತಂಕದ ನಡುವಲ್ಲೂ ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಿಗ್ಗೆ 8ರಿಂದ ಆರಂಭವಾಗಿದೆ. 

ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಜಿದ್ದಾಜಿದ್ದಿಯ ಹಣಾಹಣಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಸಾಕ್ಷಿಯಾಗಿತ್ತು. ಬಿಜೆಪಿಯ ಮಂಗಳಾ ಸುರೇಶ ಅಂಗಡಿ ಮತ್ತು ಕಾಂಗ್ರೆಸ್‌ನಿಂದ ಸತೀಶ ಜಾರಕಿಹೊಳಿ ಸ್ಪರ್ಧಿಸಿದ್ದಾರೆ.

ಕೋವಿಡ್–19 ಹಿನ್ನೆಲೆಯಲ್ಲಿ ಕೊಠಡಿಯೊಂದರಲ್ಲಿ ಕೇವಲ 2 ಟೇಬಲ್‌ಗಳಲ್ಲಿ ಮಾತ್ರ ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಒಟ್ಟು 17 ಕೊಠಡಿಗಳನ್ನು ಬಳಸಲಾಗುತ್ತಿದೆ. ಹೀಗಾಗಿ, ರಾತ್ರಿ 8ರ ಸುಮಾರಿಗೆ ಅಧಿಕೃತ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ. 

ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರತಾಪಗೌಡ ಪಾಟೀಲ ಹಾಗೂ ಕಾಂಗ್ರೆಸ್‌ನಿಂದ ಬಸನಗೌಡ ತುರ್ವಿಹಾಳ ಸೇರಿ ಎಂಟು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯಿಂದ ಶರಣು ಸಲಗರ, ಕಾಂಗ್ರೆಸ್‌ನಿಂದ ಮಾಲಾ ಬಿ.ನಾರಾಯಣರಾವ್, ಜೆಡಿಎಸ್‌ನಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ, ಪಕ್ಷೇತರರಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಸೇರಿದಂತೆ 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಕರ್ನಾಟಕ ಸೇರಿ 10 ರಾಜ್ಯಗಳ ಉಪಚುನಾವಣೆ ಮತ ಎಣಿಕೆ ಪ್ರಕ್ರಿಯೆ ಆರಂಭ
ಕರ್ನಾಟಕದ ಮೂರು ಕ್ಷೇತ್ರಗಳೂ ಸೇರಿದಂತೆ ದೇಶದ ಒಟ್ಟು 10 ರಾಜ್ಯಗಳಲ್ಲೂ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. 

ಕರ್ನಾಟಕದ 3 ಕ್ಷೇತ್ರಗಳು ಸೇರಿದಂತೆ ಆಂಧ್ರಪ್ರದೇಶದ ತಿರುಪತಿ, ಕೇರಳದ ಮಲಪ್ಪುರಂ, ತಮಿಳುನಾಡಿನ ಕನ್ಯಾಕುಮಾರಿ ಸೇರಿದಂತೆ ಒಟ್ಟು 10 ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗಳ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com