ಕೋವಿಡ್-19: ಐಸೋಲೇಷನ್, ಕೋವಿಡ್ ಕೇರ್ ಕೇಂದ್ರಗಳಲ್ಲಿರುವ ಸೋಂಕಿತರಿಗೆ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ

ಕೊರೋನಾ ಸೋಂಕಿಗೊಳಗಾಗಿ ಐಸೋಲೇಷನ್, ಹೋಮ್ ಕೇರ್ ಹಾಗೂ ಕೋವಿಡ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಚಿಕಿತ್ಸೆ ಕುರಿತು ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ ಸೋಂಕಿಗೊಳಗಾಗಿ ಐಸೋಲೇಷನ್, ಹೋಮ್ ಕೇರ್ ಹಾಗೂ ಕೋವಿಡ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಚಿಕಿತ್ಸೆ ಕುರಿತು ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದೆ. 

ವಸತಿ ಸಮುಚ್ಛಯ ಕಟ್ಟಡ (ಆರ್‌ಡಬ್ಲ್ಯೂಎ) ಅಪಾರ್ಟ್ ಮೆಂಟ್ ಕಾಂಪ್ಲೆಕ್ಸ್ ಮತ್ತು ಕಂಪನಿಗಲನ್ನು ಕೋವಿಡ್ ಕೇರ್ ಕೇಂದ್ರವಾಗಿ ಮಾರ್ಪಡಿಸಿ ಕೊರೋನಾ ಸಾಂಕ್ರಾಮಿಕ ರೋಗ ಪರಿಸ್ಥಿತಿ ನಿಭಾಯಿಸಲು ಸರ್ಕಾರಕ್ಕೆ ಸಹಾಯ ಮಾಡುವಂತೆ ಬಿಬಿಎಂಪಿ ಸಾರ್ವಜನಿಕರ ಬಳಿ ಮಾಡಿಕೊಂಡಿದ್ದು, ಈ ನಡುವಲ್ಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರು ಸೋಂಕಿತರ ಚಿಕಿತ್ಸೆ ಕುರಿತು ಪರಿಷ್ಕೃತ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದ್ದಾರೆ. 

ಮಾರ್ಗಸೂಚಿಯಲ್ಲಿ ಐಸೋಲೇಷನ್, ಹೋಮ್ ಕೇರ್ ಹಾಗೂ ಕೋವಿಡ್ ಕೇರ್ ಕೇಂದ್ರಗಳಲ್ಲಿರುವ ಸೋಂಕಿತರ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸುವ ಕುರಿತು ಮಾಹಿತಿ ನೀಡಿದ್ದಾರೆ. 

ಕ್ಲಿನಿಕಲ್ ಮಾರ್ಗದರ್ಶನದ ಜೊತೆಗೆ, ಅಲ್ಪ ಪ್ರಮಾಣದ ರೋಗಲಕ್ಷಣದ ಅಥವಾ ಲಕ್ಷಣರಹಿತ ಕೋವಿಡ್- 19 ರೋಗಿಗಳಿಗೆ ನೀಡಬೇಕಾದ ಔಷಧಿಗಳನ್ನು ಮಾರ್ಗಸೂಚಿಯಲ್ಲಿ ಪಟ್ಟಿಮಾಡಲಾಗಿದೆ. 

ಈ ಪರಿಷ್ಕೃತ ಮಾರ್ಗಸೂಚಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ, ಏಮ್ಸ್-ಐಸಿಎಂಆರ್ ಹಾಗೂ ಆರ್‌ಜಿಯುಹೆಚ್ಎಸ್ ಕ್ಲಿನಿಕಲ್ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com