ಕಲಬುರಗಿ: ಸಿಬ್ಬಂದಿ ನಿರ್ಲಕ್ಷ್ಯ, ಆಕ್ಸಿಜನ್ ಸಿಲಿಂಡರ್ ಪೈಪ್ ಬದಲಾವಣೆ ವೇಳೆ ಇಬ್ಬರು ಕೋವಿಡ್ ರೋಗಿಗಳ ಸಾವು

ಕೆಲ ದಿನಗಳ ಹಿಂದೆ ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ರೋಗಿಗಳು ಆಕ್ಸಿಜನ್ ಸರಿಯಾದ ಸಮಯಕ್ಕೆ ಸಿಗದ ಹಿನ್ನೆಲೆಯಲ್ಲಿ ಸಾವನ್ನಪ್ಪಿದ್ದಾರೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಲಬುರಗಿ: ಕೆಲ ದಿನಗಳ ಹಿಂದೆ ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ರೋಗಿಗಳು ಆಕ್ಸಿಜನ್ ಸರಿಯಾದ ಸಮಯಕ್ಕೆ ಸಿಗದ ಹಿನ್ನೆಲೆಯಲ್ಲಿ ಸಾವನ್ನಪ್ಪಿದ್ದಾರೆ.

ಕೆಬಿಎನ್ ಆಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿರುವುದಾಗಿ ಆಸ್ಪತ್ರೆ ಸೂಪರಿಂಡೆಂಟ್ ಡಾ.ಮೊಯ್ನದ್ದೀನ್ ತಿಳಿಸಿದ್ದಾರೆ.

ಆಕ್ಸಿಜನ್ ಕೊರತೆಯಿಂದ ಮೊದಲ ರೋಗಿ ಸಂಜೆ 7 ಗಂಟೆ ಸುಮಾರಿಗೆ ಸಾವನ್ನಪ್ಪಿದರು, ಒಂದು ಗಂಟೆ ನಂತರ ಮತ್ತೊಬ್ಬ ರೋಗಿಯೂ ಸಾವನ್ನಪ್ಪಿದ್ದರು, ಹೀಗಾಗಿ ಕೊರೋನಾ ರೋಗಿಗಳನ್ನು ದಾಖಲಿಸಿಕೊಳ್ಳುವುದನ್ನು ಆಸ್ಪತ್ರೆ ನಿಲ್ಲಿಸಿದೆ ಎಂದು ತಿಳಿಸಿದ್ದಾರೆ.

ಶನಿವಾರ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಗಳಿದ್ದವು, ಆದರೆ ಮುಗಿದ ನಂತರ ಆಸ್ಪತ್ರೆ ಸಿಬ್ಬಂದಿ ಪೈಪ್ ಗಳನ್ನು ಬದಲಾಯಿಸಲು ಹೋದಾಗ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ರೋಗಿಗಳು ಸಾವನ್ನಪ್ಪಿರುವ ವಿಷಯ ತಿಳಿಸಿದ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲು ಯತ್ನಿಸಿದರು. ಈ ವೇಳೆ ತಮ್ಮನ್ನು ರಕ್ಷಿಸಿಕೊಳ್ಳಲು ಸಿಬ್ಬಂದಿ ಓಡಿ ಹೋದರು.

ಆಮ್ಲಜನಕ ಕೊರತೆಯಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಜ್ಯೋತ್ಸ್ನಾ ಅವರಿಗೆ ಮಾಹಿತಿ ನೀಡಲಾಗಿತ್ತು, ಆದರೆ ಇದುವರೆಗೂ ಸತ್ತವರ ಬಗ್ಗೆ ಸರಿಯಾದ ಮಾಹಿತಿ ದೊರೆತಿಲ್ಲ, ಕೆಬಿಎನ್ ಆಸ್ಪತ್ರೆ ಆಕ್ಸಿಜನ್ ಗಾಗಿ ಯಾವುದೇ ಮನವಿ ಸಲ್ಲಿಸಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆ ಶಿಫಾರಸ್ಸು ಮಾಡಿದ್ದ ಕೋವಿಡ್ ರೋಗಿಗಳಿಗೆ ಕೆಬಿಎನ್ ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲಿಲ್ಲ ಎಂದು ಹೇಳಿದ್ದಾರೆ. ಜಿಲ್ಲಾಡಳಿತ ಕೆಬಿಎನ್ ಆಸ್ಪತ್ರೆಗೆ 10 ಆಕ್ಸಿಜನ್ ಸಿಲಿಂಡರ್ ಪೂರೈಕೆ  ಮಾಡಲಾಗಿತ್ತು. ನಿರ್ಲಕ್ಷ್ದ ಆರೋಪದ ಮೇಲೆ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com