ಒಳ್ಳೆ ಸುದ್ದಿ: ಭಾನುವಾರ ಒಂದೇ ದಿನ ರಾಜ್ಯದಲ್ಲಿ 21 ಸಾವಿರ ಕೊರೋನಾ ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ

ಭಾನುವಾರ ಒಂದೇ ದಿನ ರಾಜ್ಯದಲ್ಲಿ ದಾಖಲೆ ಪ್ರಮಾಣದಲ್ಲಿ ಕೋವಿಡ್-10 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಭಾನುವಾರ ಒಂದೇ ದಿನ ರಾಜ್ಯದಲ್ಲಿ ದಾಖಲೆ ಪ್ರಮಾಣದಲ್ಲಿ ಕೋವಿಡ್-10 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 

ಭಾನುವಾರ 21, 149 ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಸಾಂಕ್ರಾಮಿಕ ಉಲ್ಬಣದ ನಂತರ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಸೋಂಕಿತರು ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ.

ಕಳೆದ ವರ್ಷ ಆಕ್ಟೋಬರ್ 22 ರಂದು 13, 550 ರೋಗಿಗಳು, ಸೆಪ್ಟೆಂಬರ್ 11 ರಂದು ಶೇ. 76.06 ರಷ್ಟು  ಚೇತರಿಕೆ ಪ್ರಮಾಣದೊಂದಿಗೆ ಎರಡನೇ  ಬಾರಿಗೆ ಹೆಚ್ಚಿನ ಸಂಖ್ಯೆಯ ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಆದರೆ, ಜನವರಿ 30ರ ನಂತರ ಸೋಂಕಿನ ಪ್ರಮಾಣ ಶೇ. 98.06 ರಷ್ಟಿದ್ದು, ಚೇತರಿಕೆ ಪ್ರಮಾಣ ಶೇ.72. 69 ರಷ್ಟಿದೆ.

ಆದಾಗ್ಯೂ, ಸಾವಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ನಾಲ್ಕನೇ ದಿನವೂ ರಾಜ್ಯದಲ್ಲಿ ಸಾವಿನ ಪ್ರಮಾಣ 200ಕ್ಕೂ ಹೆಚ್ಚಿದೆ. ಭಾನುವಾರ 217 , ಶನಿವಾರ 271 ಸಾವಿನ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ಭಾನುವಾರ 64 ಸೋಂಕಿತರು ಸಾವನ್ನಪ್ಪಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com