20 ವರ್ಷಗಳಿಂದ ಮುಚ್ಚಿದ್ದ ಕೆಜಿಎಫ್‌ನ ಬಿಜಿಎಮ್‌ಎಲ್ ಆಸ್ಪತ್ರೆಗೆ ಮರುಜೀವ: ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ!

20 ವರ್ಷಗಳ ಹಿಂದೆ ಬಾಗಿಲು ಹಾಕಿದ್ದ ಬಿಜಿಎಂಎಲ್ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಮಾರ್ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೋಲಾರ: 20 ವರ್ಷಗಳ ಹಿಂದೆ ಬಾಗಿಲು ಹಾಕಿದ್ದ ಬಿಜಿಎಂಎಲ್ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಮಾರ್ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 

ನಿನ್ನೆಯಷ್ಟೇ ಕೋಲಾರ ಸಂಸದ ಎಸ್. ಮುನಿಸ್ವಾಮಿಯವರು ಕೋಲಾರ ಉಪ ಆಯುಕ್ತ ಡಾ.ಸೆಲ್ವಮಣಿಯವರೊಂದಿಗೆ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್'ಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. 

ಈ ವೇಳೆ ಮಾತನಾಡಿದ ಅವರು, 2001ರಲ್ಲಿ ಆಸ್ಪತ್ರೆಯನ್ನು ಮುಚ್ಚಲಾಗಿತ್ತು. ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಲುವಾಗಿ ಇದೀಗ ಮತ್ತೆ ತೆರೆಯಲಾಗುತ್ತಿದ್ದು, ಆಸ್ಪತ್ರೆಯನ್ನು ಕೋವಿಡ್ ಕೇರ್ ಕೇಂದ್ರವಾಗಿ ಮಾರ್ಪಡಿಸಲಾಗುತ್ತದೆ ಎಂದು ಹೇಳಿದ್ದಾರೆ. 

ಈ ಕುರಿತು ಇನ್ನೊಂದು ಅಥವಾ ಎರಡು ದಿನಗಳಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದೇನೆ. ಬಿಜೆಪಿ ಕಾರ್ಯಕರ್ತರು ಕಳೆದ 1 ವಾರದಿಂದ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತೆ ಕಾರ್ಯ ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ. 

 ಬರೋಬ್ಬರಿ 140 ವರ್ಷಗಳ ಇತಿಹಾಸವಿರುವ ಬ್ರಿಟಿಷರ ಕಾಲದ ಬಿಜಿಎಂಎಲ್ ಆಸ್ಪತ್ರೆಯನ್ನು 20 ವರ್ಷಗಳ ಹಿಂದೆ ಮುಚ್ಚಲಾಗಿತ್ತು. ಆಸ್ಪತ್ರೆಯಲ್ಲಿ ಸುಮಾರು 100 ಜನರು ಇರುವಷ್ಟು ನಾಲ್ಕು ಬೃಹತ್‌ ವಾರ್ಡ್‌ಗಳು ಇದ್ದು, ಪ್ರತ್ಯೇಕ ಕೋಣೆಗಳು ಕೂಡ ಸಾಕಷ್ಟು ಸಂಖ್ಯೆಯಲ್ಲಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com