ಅಜ್ಜರಕಾಡು ಸರ್ಕಾರಿ ಆಸ್ಪತ್ರೆಯಲ್ಲಿ ಹಾಸಿಗೆ ಕೊರತೆಯಿಲ್ಲ: ಸಚಿವ ಬೊಮ್ಮಾಯಿ

ಜಿಲ್ಲೆಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಯಲ್ಲಿ ಹಾಸಿಗೆಯ ಕೊರತೆಯಿಲ್ಲ ಎಂದು ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. 
ಅಜ್ಜರಕಾಡು ಸರ್ಕಾರಿ ಆಸ್ಪತ್ರೆಯಲ್ಲಿ ಸಚಿವ ಬೊಮ್ಮಾಯಿ
ಅಜ್ಜರಕಾಡು ಸರ್ಕಾರಿ ಆಸ್ಪತ್ರೆಯಲ್ಲಿ ಸಚಿವ ಬೊಮ್ಮಾಯಿ

ಉಡುಪಿ: ಜಿಲ್ಲೆಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಯಲ್ಲಿ ಹಾಸಿಗೆಯ ಕೊರತೆಯಿಲ್ಲ ಎಂದು ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. 

ನಿನ್ನೆಯಷ್ಟೇ ಸಚಿವ ಬೊಮ್ಮಾಯಿಯವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. 

ಉಡುಪಿಯಲ್ಲಿ ಪ್ರತೀದಿನ 600ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಪ್ರಸ್ತುತ ಬೇರೆ ಜಿಲ್ಲೆಯ ಮತ್ತು ಉಡುಪಿಯ ಖಾಸಗಿ ಆಸ್ಪತ್ರೆಗಳ ಲ್ಯಾಬ್ ಗಳ ಸಹಾಯದಿಂದ ಪ್ರತಿದಿನ 3000ರಷ್ಟು ಮಂದಿಯನ್ನು ಪರೀಕ್ಷೆ ಮಾಡಲಾಗುತ್ತಿದೆ. ಇನ್ನೂ 1500 ಮಂದಿಯನ್ನು ಹೆಚ್ಚುವರಿ ಪರೀಕ್ಷೆ ಮಾಡಿಸಬೇಕಾಗಿದೆ. ಆದರೆ, ಈಗಿರುವ ಜಿಲ್ಲೆಯ ಏಕೈಕ ಸರ್ಕಾರಿ ಲ್ಯಾಬ್ ಮೇಲೆ ಒತ್ತಡ ಹೆಚ್ಚಾಗುವುದರಿಂದ ಈ ಲ್ಯಾಬ್ ನಲ್ಲಿಯೇ 3000 ಮಂದಿಯನ್ನು ಪರೀಕ್ಷೆ ಮಾಡುವುದಕ್ಕಾಗಿ ಇನ್ನೊಂದು ಲ್ಯಾಬ್ ಆರಂಭಿಸಲಾಗುತ್ತದೆ ಎಂದು ಹೇಳಿದರು. 

ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ಕೊರೋನಾ ಪ್ರಕರಣಗಳು ಹೆಚ್ಚಿದ್ದರೂ, ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಇಲ್ಲ. ಮುಂಜಾಗರೂಕ ಕ್ರಮವಾಗಿ ಜಿಲ್ಲಾಸ್ಪತ್ರೆಯಲ್ಲಿ ಸುಮಾರು 25 ಆಕ್ಸಿಜನ್ ಹಾಸಿಗೆಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು. 

ಮುಂದಿನ ದಿನಗಳಲ್ಲಿ ಸಾರಿ ಕೇಸ್ ಗಳು ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ. ಆದ್ದರಿಂದ ಜಿಲ್ಲೆಯಲ್ಲಿ ಕೊರೋನಾ ಮತ್ತು ಸಾರಿ ಕೇಸ್ ಗಳಿಗೆ ಪ್ರತ್ಯೇಕ ಹಾಸಿಗೆಗಳನ್ನು ಮೀಸಲಿರಿಸಿದ್ದೇವೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com