ಆತ್ಮಹತ್ಯೆ ಯತ್ನ ಪ್ರಕರಣ: ಶಾಸಕ ಗೂಳಿಹಟ್ಟಿ ಶೇಖರ್ ನಿರಾಳ

ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪದ ಮೇಲೆ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ವಿರುದ್ಧ  ದಾಖಲಿಸಲಾಗಿದ್ದ ಪ್ರಕರಣವನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಕೇಸ್ ದಾಖಲಿಸುವಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಹತ್ವದ ಪಾತ್ರ ವಹಿಸಿದ್ದು, ಆರೋಪಿ ವಿರುದ್ಧ ಸಾಕ್ಷಿಯನ್ನು ಸೃಷ್ಟಿಸಿರುವುದನ್ನು ನ್ಯಾಯಾಲಯ ಗಮನಿಸಿದೆ.
ಶಾಸಕ ಗೂಳಿಹಟ್ಟಿ ಶೇಖರ್
ಶಾಸಕ ಗೂಳಿಹಟ್ಟಿ ಶೇಖರ್

ಚಿತ್ರದುರ್ಗ: ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪದ ಮೇಲೆ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಕೇಸ್ ದಾಖಲಿಸುವಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಹತ್ವದ ಪಾತ್ರ ವಹಿಸಿದ್ದು, ಆರೋಪಿ ವಿರುದ್ಧ ಸಾಕ್ಷಿಯನ್ನು ಸೃಷ್ಟಿಸಿರುವುದನ್ನು ನ್ಯಾಯಾಲಯ ಗಮನಿಸಿದೆ.

ತಮ್ಮ ಬೆಂಬಲಿಗರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಜನವರಿ 6, 2019 ದಂದು ಚಿತ್ರದುರ್ಗದ ಹೊಸದುರ್ಗ ಪೊಲೀಸ್ ಠಾಣೆ ಎದುರು ಪೆಟ್ರೋಲ್ ಸುರಿದುಕೊಂಡು ಗೂಳಿಹಟ್ಟಿ ಶೇಖರ್ ಆತ್ಮಹತ್ಯೆಗೆ ಯತ್ನಿಸಿದ್ದರು. ಐಪಿಸಿ ಸೆಕ್ಷನ್ 309ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಈ ಸಂಬಂಧ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಆರೋಪಿಯ ವರ್ಚಸ್ಸು ಕುಂದಿಸಲು ಹೊಸದುರ್ಗ
ಪೊಲೀಸ್ ಠಾಣೆಯ ಪಿಎಸ್ ಐ ಸುಳ್ಳು ಕೇಸ್ ಹಾಕಿಸಿದ್ದಾರೆ ಎಂದು ಶೇಖರ್ ಪರ ವಾದಿಸಿದ ವಕೀಲರು, ಪಿಎಸ್ ಐ, ಎಸ್ ಪಿಗೆ
ಪತ್ರ ಬರೆದಿರುವುದನ್ನು ಉಲ್ಲೇಖಿಸಿದರು.

ಸಾಕ್ಷ್ಯ ಸಂಗ್ರಹ ವೇಳೆಯಲ್ಲಿ ಪಿಎಸ್ ಐ ಉದ್ದೇಶಪೂರ್ವಕವಾಗಿ ಪೊಲೀಸರಿಂದ ದೂರು ಕೊಡಿಸಿರುವುದು ಕಂಡುಬಂದಿತು. ಅಲ್ಲದೇ, ಠಾಣೆಯಲ್ಲಿನ ಸಿಸಿಟಿವಿ ದೃಶ್ಯಾವಳಿ ಒದಗಿಸುವಲ್ಲಿ ಪೊಲೀಸರು ವಿಫಲರಾದರು. ಇವೆಲ್ಲಾವನ್ನು ಗಮನಿಸಿದ ವಿಶೇಷ ನ್ಯಾಯಾಧೀಶ ಗೋಪಾಲಕೃಷ್ಣ ಭಟ್, ಆರೋಪಿ ಆತ್ಮಹತ್ಯೆಗೆ ಪ್ರಯತ್ನಿಸಿಲ್ಲ ಎಂದು ಹೇಳಿ ಪ್ರಕರಣವನ್ನು ಖುಲಾಸೆಗೊಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com