ಕಲಬುರಗಿ: ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರೂ ಆಸ್ಪತ್ರೆ ಸಿಬ್ಬಂದಿ ಕೊರತೆಯಿಂದಾಗಿ 4 ಸೋಂಕಿತರು ಸಾವು

ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿದ್ದ ನಾಲ್ವರು ಕೊರೋನಾ ಸೋಂಕಿತರು ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರೂ, ಸಿಬ್ಬಂದಿಗಳ ಕೊರತೆಯಿಂದಾಗಿ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಆಳಂದ ತಾಲೂಕು ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಲಬುರಗಿ: ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿದ್ದ ನಾಲ್ವರು ಕೊರೋನಾ ಸೋಂಕಿತರು ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರೂ, ಸಿಬ್ಬಂದಿಗಳ ಕೊರತೆಯಿಂದಾಗಿ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಆಳಂದ ತಾಲೂಕು ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ. 

ಈ ಕುರಿತು ಆಳಂದ ತಾಲೂಕು ಆರೋಗ್ಯಾಧಿಕಾರಿ ಡಾ.ಅಭಯ್ ಕುಮಾರ್ ಅವರು ಮಾಹಿತಿ ನೀಡಿದ್ದು, ಆಸ್ಪತ್ರೆಯಲ್ಲಿ ಕಳೆದ ಕೆಲವು ದಿಗಳಿಂದ 16 ಕೊರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ 70 ವರ್ಷ ಮೇಲ್ಪಟ್ಟ ಹಾಗೂ ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿದ್ದ ನಾಲ್ವರು ಆಕ್ಸಿಜನ್ ಬೆಂಬಲ ನೀಡಿದ್ದರೂ ಸಾವನ್ನಪ್ಪಿದ್ದಾರೆಂದು ಹೇಳಿದ್ದಾರೆ. 

ಆಸ್ಪತ್ರೆಯಲ್ಲಿ ಒಟ್ಟು ವೆಂಟಿಲೇಟರ್ ಹಾಸಿಗೆಗಳಿದ್ದು, ಜನರಲ್ ಮೆಡಿಸಿನ್'ಗೆ ತಜ್ಞರ ವೈದ್ಯರಿಲ್ಲ. ಪ್ರಮುಖವಾಗಿ ವೆಂಟಿಲೇಟರ್ ಬೆಂಬಲ ಪಡೆದ ಸೋಂಕಿತರನ್ನು ನೋಡಿಕೊಳ್ಳಲು ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಲ್ಲ. ಇದಲ್ಲದೆ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರೂ ಕೂಡ ಇಲ್ಲ. ಅರಿವಳಿಕೆ ತಜ್ಞರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 

ಈ ನಡುವೆ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿಗಳ ಸಂಬಂಧಿಕರು ಸೋಂಕಿತನರ್ನು ಕಲಬುರಗಿಯ ಜಿಮ್ಸ್'ಗೆ ದಾಖಲು ಮಾಡುವಂತೆ ಸಲಹೆ ನೀಡಲಾಗುತ್ತಿದೆ. ಆದರೆ, ಕುಟುಂಬಸ್ಥರು ತಾಲೂಕು ಆಸ್ಪತ್ರೆಯಲ್ಲಿಯೇ ಇರಿಸುವುದಾಗಿ ಹೇಳುತ್ತಿದ್ದಾರೆಂದು ಆಭಯ್ ಕುಮಾರ್ ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com