ವೆಬ್ ಸೈಟ್ ಮೂಲಕ ಸರಕಾರಿ-ಖಾಸಗಿ ಆಸ್ಪತ್ರೆಗಳ ಬೆಡ್ ಮಾಹಿತಿ ಒದಗಿಸಲು ಕಾರಜೋಳ ಸೂಚನೆ

ಬೆಳಗಾವಿ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಪ್ರತಿದಿನ ವೆಬ್‌ಸೈಟ್‌ ಮೂಲಕ ಜನರಿಗೆ ನೀಡಬೇಕು ಎಂದು ಉಪಮುಖ್ಯಮಂತ್ರಿ ಮಂತ್ರಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Published: 04th May 2021 03:05 PM  |   Last Updated: 04th May 2021 03:30 PM   |  A+A-


ಗೋವಿಂದ ಕಾರಜೋಳ

Posted By : Raghavendra Adiga
Source : UNI

ಬೆಂಗಳೂರು: ಬೆಳಗಾವಿ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಪ್ರತಿದಿನ ವೆಬ್‌ಸೈಟ್‌ ಮೂಲಕ ಜನರಿಗೆ ನೀಡಬೇಕು ಎಂದು ಉಪಮುಖ್ಯಮಂತ್ರಿ ಮಂತ್ರಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮತ್ತು ಅಗತ್ಯ ಚಿಕಿತ್ಸೆ ಒದಗಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಸೇರಿ ಎಲ್ಲ ಹಿರಿಯ ಅಧಿಕಾರಿಗಳ ಜತೆ ಮಂಗಳವಾರ ಝೂಮ್ ಸಭೆಯ ಮೂಲಕ ಅವರು ಚರ್ಚೆ ನಡೆಸಿದರು.

ಆಕ್ಸಿಜನ್, ರೆಮಿಡಿಸಿವಿರ್ ಮತ್ತಿತರ ಔಷಧೋಪಕರಣಗಳ ಕೊರತೆ ಉಂಟಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು.

ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ಆರೋಗ್ಯದ ಸಮಸ್ಯೆಗಳಿಗೆ ಸ್ಪಂದಿಸಲು ಎಲ್ಲ ಅಧಿಕಾರಿಗಳು ಸಮನ್ವಯತೆಯೊಂದಿಗೆ 24 ಗಂಟೆಯೂ ಕೆಲಸ ಮಾಡಲು ಮುಂದಾಗಬೇಕು ಎಂದು ತಿಳಿಸಿದರು. ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ಆಕ್ಸಿಜನ್ ಕೊರತೆಯ ಬಗ್ಗೆ ಸಾಕಷ್ಟು ವರದಿಗಳು ಬರುತ್ತಿವೆ. ಆದ್ದರಿಂದ ಜಿಲ್ಲೆಯಲ್ಲಿ ಲಭ್ಯವಿರುವ ಆಕ್ಸಿಜನ್ ದಾಸ್ತಾನು, ದೈನಂದಿನ ಬಳಕೆ ಹಾಗೂ ತುರ್ತು ಸಂದರ್ಭದಲ್ಲಿ ಪೂರೈಕೆಯ ಮೇಲೆ ನಿರಂತರ ನಿಗಾ ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.


Stay up to date on all the latest ರಾಜ್ಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp