ಹಾಸಿಗೆ ಲಭ್ಯತೆ ಕುರಿತ ಮಾಹಿತಿಯನ್ನು ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಿ: ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಸೂಚನೆ

ಖಾಸಗಿ ಆಸ್ಪತ್ರೆಗಳಿಗೆ ನೇರವಾಗಿ ದಾಖಲಾಗುವ ಕೋವಿಡ್ ಸೋಂಕಿತರ ಸಂಖ್ಯೆಮತ್ತು ಹಾಸಿಗೆ ಲಭ್ಯತೆ ಕುರಿತ ಮಾಹಿತಿಯನ್ನು ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಖಾಸಗಿ ಆಸ್ಪತ್ರೆಗಳಿಗೆ ಆದೇಶಿಸಿದ್ದಾರೆ. 
ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ
ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಿಗೆ ನೇರವಾಗಿ ದಾಖಲಾಗುವ ಕೋವಿಡ್ ಸೋಂಕಿತರ ಸಂಖ್ಯೆ ಮತ್ತು ಹಾಸಿಗೆ ಲಭ್ಯತೆ ಕುರಿತ ಮಾಹಿತಿಯನ್ನು ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಖಾಸಗಿ ಆಸ್ಪತ್ರೆಗಳಿಗೆ ಆದೇಶಿಸಿದ್ದಾರೆ. 

ನಗರದಲ್ಲಿ ಕೆಪಿಎಂಇ ಅಡಿ ನೋಂದಣಿಯಾಗಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ಕೋಟಾದಡಿ ಹಾಸಿಗೆ ನೀಡುತ್ತಿರುವ ಮಾಹಿತಿ ಮಾತ್ರ ಲಭ್ಯವಾಗುತ್ತಿದೆ. ಖಾಸಗಿ ಕೋಟಾದಡಿ ನೀಡುತ್ತಿರುವ ಹಾಸಿಕೆಗಳ ಮಾಹಿತಿ ಯಾರಿಗೂ ಲಭ್ಯವಾಗುತ್ತಿಲ್ಲ. ಇದರಿಂದ ಖಾಸಗಿ ಕೋಟಾದಡಿ ಚಿಕಿತ್ಸೆ ಪಡೆಯಲು ಇಚ್ಛಿಸುವ ಸೋಂಕಿತರಿಗೆ ಮಾಹಿತಿ ಲಭ್ಯವಾಗದೆ ತೊಂದರೆ ಅನುಭವಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್ (ಫನಾ) ಖಾಸಗಿ ಕೋಟಾದಡಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುವ ಮಾಹಿತಿಯೂ ಸಿಗಬೇಕೆಂಬ ಉದ್ದೇಶದಿಂದ ಹೊಸದಾಗಿ ಹಾಸಿಗೆ ಮಾಹಿತಿ ಒದಗಿಸಬಲ್ಲ ಪೋರ್ಟಲ್ ಸಿದ್ಧಪಡಿಸಿದೆ. 

ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಖಾಸಗಿಯಾಗಿ (ನೇರವಾಗಿ) ದಾಖಲಾಗುವ ಕೋವಿಡ್ ಸೋಂಕಿತರ ಸಂಖ್ಯೆ ಮತ್ತು ಹಾಸಿಗೆ ಲಭ್ಯತೆ ಮಾಹಿತಿಯನ್ನು ಪೋರ್ಟಲ್ https://searchmybed.com/#/p/public-portal ನಲ್ಲಿ ರಿಯಲ್ ಟೈಮ್ ನಲ್ಲಿ ಕಡ್ಡಾಯವಾಗಿ ಅಪ್ಲೋಡ್ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. 

ಕೆಪಿಎಂಇ ಅಡಿ ನೋಂದಣಿಯಾಗಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ಸದರಿ ಪೋರ್ಟಲ್ ನಲ್ಲಿ ಸಾಮಾನ್ಯ, ಹೆಚ್'ಡಿಯು, ಐಸಿಯು, ಐಸಿಯು-ವೆಂಟಿಲೇಟರ್ ಹಾಸಿಗೆಗಳ ರಿಯಲ್ ಟೈಂ ಮಾಹಿತಿಯನ್ನು ಅಪ್ಲೋಡ್ ಮಾಡಬೇಕು. ಆಸ್ಪತ್ರೆಯ ಹೆಲ್ಪ್ ಡೆಸ್ಕ್ ಗಳ ಬಳಿ ಹಾಸಿಗೆ ಲಭ್ಯತೆಯ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ಸೂಚಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com