ಲಾಕ್ ಡೌನ್ ಕುರಿತು ಇಂದು ಸಂಜೆ ಪ್ರಧಾನಿ ಆದೇಶದ ಪ್ರಕಾರ ತೀರ್ಮಾನ: ಮುಖ್ಯಮಂತ್ರಿ ಯಡಿಯೂರಪ್ಪ
ರಾಜ್ಯದಲ್ಲಿ ಲಾಕ್‌ಡೌನ್ ಮಾಡುವ ಕುರಿತು ಕೇಂದ್ರದ ನಿರ್ದೇಶನದ ನಿರೀಕ್ಷೆಯಲ್ಲಿದ್ದೇವೆ. ಪ್ರಧಾನಮಂತ್ರಿ ಅವರ ಸೂಚನೆಯನ್ವಯ ಸರ್ಕಾರ ಅಗತ್ಯ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
Published: 05th May 2021 01:55 PM | Last Updated: 05th May 2021 03:15 PM | A+A A-

ಮಾಜಿ ಮುಖ್ಯಮಂತ್ರಿ ದಿ. ಕೆ.ಸಿ.ರೆಡ್ಡಿ ಅವರ 119ನೇ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಇಂದು ವಿಧಾನಸೌಧದ ಆವರಣದಲ್ಲಿನ ಕೆ.ಸಿ.ರೆಡ್ಡಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಮಾಡುವ ಕುರಿತು ಕೇಂದ್ರದ ನಿರ್ದೇಶನದ ನಿರೀಕ್ಷೆಯಲ್ಲಿದ್ದೇವೆ. ಪ್ರಧಾನಮಂತ್ರಿ ಅವರ ಸೂಚನೆಯನ್ವಯ ಸರ್ಕಾರ ಅಗತ್ಯ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಇಂದು ಮಾಜಿ ಮುಖ್ಯಮಂತ್ರಿ ಕೆ.ಸಿ. ರೆಡ್ಡಿ ಅವರ 119ನೇ ಜನ್ಮದಿನದ ಅಂಗವಾಗಿ ವಿಧಾನಸೌಧದ ಪಶ್ಚಿಮ ಭಾಗದಲ್ಲಿರುವ ಕೆ.ಸಿ. ರೆಡ್ಡಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಕೆ.ಸಿ. ರೆಡ್ಡಿ ಅವರು ರಾಜ್ಯಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಕೊರೋನಾ ಲಾಕ್ ಡೌನ್ ಹೇರಿಕೆ ಮಾಡಿದರೆ ಕರ್ನಾಟಕದಲ್ಲಿಯೂ ಕಡ್ಡಾಯವಾಗಿ ಪಾಲನೆ ಮಾಡಲೇಬೇಕಾಗುತ್ತದೆ. ದೇಶದ ಪ್ರಧಾನಿಯವರು ಇಂದು ಏನೇನು ಚರ್ಚೆ ಮಾಡುತ್ತಾರೆ, ನಿಯಮ ತರುತ್ತಾರೆ ಅದನ್ನು ಕಾರ್ಯರೂಪಕ್ಕೆ ತರಬೇಕಾಗಿದೆ. ಅವರು ಏನು ಹೇಳುತ್ತಾರೆ, ಏನು ಆದೇಶ ಕೊಡುತ್ತಾರೆ ಎಂದು ನಾವು ಕೂಡ ಕಾಯುತ್ತಿದ್ದೇವೆ. ಸಾಯಂಕಾಲ ನಂತರ ಅವರ ಆದೇಶದ ಪ್ರಕಾರ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.
ಮಾಜಿ ಮುಖ್ಯಮಂತ್ರಿ ದಿ. ಕೆ.ಸಿ.ರೆಡ್ಡಿ ಅವರ 119ನೇ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ @BSYBJP ರವರು ಇಂದು ವಿಧಾನಸೌಧದ ಆವರಣದಲ್ಲಿನ ಕೆ.ಸಿ.ರೆಡ್ಡಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
— CM of Karnataka (@CMofKarnataka) May 5, 2021
ಕೆ.ಸಿ.ರೆಡ್ಡಿ ಅವರ ಮೊಮ್ಮಗಳು ಕವಿತಾ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು. pic.twitter.com/O6KdE5DvH3