ರಾಜ್ಯದಲ್ಲಿ ಕೊರೋನಾ ಬ್ಲಾಸ್ಟ್: ಇಂದು 50,112 ಮಂದಿಗೆ ಪಾಸಿಟಿವ್; ಬೆಂಗಳೂರಿನಲ್ಲಿ 161 ಸೇರಿ 346 ಮಂದಿ ಸಾವು

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಬುಧವಾರ ಒಂದೇ ದಿನ ಬರೋಬ್ಬರಿ 346 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 16884ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಬುಧವಾರ ಒಂದೇ ದಿನ ಬರೋಬ್ಬರಿ 346 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 16884ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ  50,112 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 17,41,046ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 23,106 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 8.63,380ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 161 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 26841 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 12,36854ಕ್ಕೆ ಏರಿಕೆಯಾಗಿದೆ. ಇನ್ನು 4,87,288 ಸಕ್ರೀಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com