ಆಕ್ಸಿಜನ್, ಹಾಸಿಗೆ ಸಾಮರ್ಥ್ಯಕ್ಕೆ ತಕ್ಕಂತೆ ರೋಗಿಗಳನ್ನು ದಾಖಲಿಸಿಕೊಳ್ಳಿ: ಆಸ್ಪತ್ರೆಗಳಿಗೆ ಬಿಬಿಎಂಪಿ ಸೂಚನೆ

ಕೋವಿಡ್-19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಭ್ಯವಿರುವ ಆಕ್ಸಿಜನ್, ಹಾಸಿಗೆ ಸಾಮರ್ಥ್ಯಕ್ಕೆ ಅನುಗುಣವಾಗಿ ರೋಗಿಗಳನ್ನು ದಾಖಲು ಮಾಡಿಕೊಳ್ಳಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೋವಿಡ್-19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಭ್ಯವಿರುವ ಆಕ್ಸಿಜನ್, ಹಾಸಿಗೆ ಸಾಮರ್ಥ್ಯಕ್ಕೆ ಅನುಗುಣವಾಗಿ ರೋಗಿಗಳನ್ನು ದಾಖಲು ಮಾಡಿಕೊಳ್ಳಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಖಾಸಗಿ ಆಸ್ಪತ್ರೆಗಳು ಆಕ್ಸಿಜನ್, ಹಾಸಿಗೆ ಸಾಮರ್ಥ್ಯಕ್ಕಿಂತ ಅಧಿಕ ರೋಗಿಗಳನ್ನು ದಾಖಲಿಸಿಕೊಂಡಿರುವ ಮಾಹಿತಿ ಲಭಿಸಿದೆ. ಸಾಮರ್ಥ್ಯ ಇಲ್ಲದಿದ್ದರೂ ರೋಗಿಗಳನ್ನು ದಾಖಲಿಸಿಕೊಂಡು ಅವರ ಜೀವದ ಜೊತೆಗೆ ಚೆಲ್ಲಾಟ ಆಡುವುದು ಸರಿಯಲ್ಲ. ಈ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಿದರು. 

ಪಾಲಿಕೆ ವ್ಯಾಪ್ತಿಯಲ್ಲಿ ಸರ್ಕಾರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸುಮಾರು ಹನ್ನೊಂದು ಸಾವಿರ ಹಾಸಿಗೆಗಳು ಸೆಂಟ್ರಲ್ ಬೆಡ್ ಮ್ಯಾನೇಜ್ ಮೆಂಟ್ ಸಿಸ್ಟಮ್ ಅಡಿ ಇದ್ದು, ಅದರಂತೆ ಕಳೆದ 5 ದಿನಗಳಿಂದ ಹಲವು ಹಾಸಿಗೆ ವ್ಯವಸ್ಥೆಯ ಸೌಲಭ್ಯವನ್ನು ಈ ವ್ಯವಸ್ಥೆ ಮೂಲಕ ಹಂಚಿಕೆ ಮಾಡಲಾಗಿದೆ. ಅದೇ ರೀತಿ ಜೀವ ರಕ್ಷಕ ರೆಮ್'ಡೆಸಿವಿರ್ ಸಹ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು ಎಂದರು. 

ಖಾಸಗಿ ಆಸ್ಪತ್ರೆಗಳಲ್ಲಿ ಖಾಸಗಿಯಾಗಿ ದಾಖಲಾದ ರೋಗಿಯ ಕುರಿತು, ಲಭ್ಯವಿರುವ ಹಾಸಿಗೆ, ಅಗತ್ಯವಿರುವ ರೆಮ್ಡೆಸಿವಿರ್ ಇತ್ಯಾದಿ ಮಾಹಿತಿಗಳನ್ನು ಅಪ್ರೋಡ್ ಮಾಡಬೇಕು. ಅದರ ಆಧಾರದ ಮೇಲೆ ರೆಮ್ಡೆಸಿವಿರ್ ಒದಗಿಸಲಾಗುವುದು ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com