ರಾಜ್ಯದಲ್ಲಿ ಮತ್ತೊಂದು ದುರಂತ: ಆಕ್ಸಿಜನ್ ಕೊರತೆಯಿಂದ ಹುಬ್ಬಳ್ಳಿಯಲ್ಲಿ 5 ಮಂದಿ ಕೊರೋನಾ ರೋಗಿಗಳ ಸಾವು!

ಚಾಮರಾಜನಗರ ಹಾಗೂ ಕಲಬುರಗಿ ಸಂಭವಿಸಿದ ಕೋವಿಡ್ ದುರಂತದ ಬಳಿಕ ಇಂತಹದ್ದೇ ಮತ್ತೊಂದು ದುರಂತ ಹುಬ್ಬಳ್ಳಿಯಲ್ಲಿ ಸಂಭವಿಸಿದೆ. ಆಕ್ಸಿಜನ್ ಕೊರತೆಯಿಂದಾಗಿ ಐವರು ಕೊರೋನಾ ಸೋಂಕಿತರು ಏಕಕಾಲಕ್ಕೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. 

Published: 05th May 2021 10:24 AM  |   Last Updated: 05th May 2021 01:11 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : ANI

ಹುಬ್ಬಳ್ಳಿ: ಚಾಮರಾಜನಗರ ಹಾಗೂ ಕಲಬುರಗಿ ಸಂಭವಿಸಿದ ಕೋವಿಡ್ ದುರಂತದ ಬಳಿಕ ಇಂತಹದ್ದೇ ಮತ್ತೊಂದು ದುರಂತ ಹುಬ್ಬಳ್ಳಿಯಲ್ಲಿ ಸಂಭವಿಸಿದೆ. ಆಕ್ಸಿಜನ್ ಕೊರತೆಯಿಂದಾಗಿ ಐವರು ಕೊರೋನಾ ಸೋಂಕಿತರು ಏಕಕಾಲಕ್ಕೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. 

ಹುಬ್ಬಳ್ಳಿಯ ಲೈಫ್'ಲೈನ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸೇರಿದಂತೆ ಐವರು ಸೋಂಕಿತರು ಮೃತಪಟ್ಟಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಈ ನಡುವೆ ಸೋಂಕಿತರ ಸಾವಿಗೆ ಆಕ್ಸಿಜನ್ ಕೊರತೆಯೇ ಕಾರಣ ಎಂದು ಮೃತಪಟ್ಟವರ ಸಂಬಂಧಿಕರು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ಜಿಲ್ಲಾ ಆಡಳಿತ ಮಂಡಳಿಯ ಅಧಿಕಾರಿಗಳು ನಿರಾಕರಿಸಿದ್ದಾರೆ. 

 ಆಸ್ಪತ್ರೆಯಲ್ಲಿ ಆಕ್ಸಿಜನ್‌ ಉತ್ಪಾದನಾ ಘಟಕವೇ ಇದೆ. ಘಟನೆ ಕುರಿತು ತಜ್ಞರ ಸಮಿತಿ ತನಿಖೆ ನಡೆಸುತ್ತಿದೆ. ತನಿಖೆ ಬಳಿಕ ಸತ್ಯಾಂಶಗಳು ಬಹಿರಂಗಗೊಳ್ಳಲಿವೆ ಎಂದು ಸ್ಪಷ್ಟಪಡಿಸಿದ್ದಾರೆ. 


Stay up to date on all the latest ರಾಜ್ಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp