ಕೋವಿಡ್-19: ಒಂದು ಕೋಟಿ ಡೋಸ್ ಲಸಿಕೆ ವಿತರಿಸಿದ ಕರ್ನಾಟಕ

ಕರ್ನಾಟಕ ಬುಧವಾರ ಒಂಜು ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಪೂರೈಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.
ಸುಧಾಕರ್
ಸುಧಾಕರ್

ಬೆಂಗಳೂರು: ಕರ್ನಾಟಕ ಬುಧವಾರ ಒಂಜು ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಪೂರೈಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.

ಕರ್ನಾಟಕ ಇಂದು 1 ಕೋಟಿ ಡೋಸ್ ಲಸಿಕೆ ವಿತರಣೆ ಪೂರೈಸಿದೆ. ಈವರೆಗೂ ಕೇಂದ್ರದಿಂದ ರಾಜ್ಯಕ್ಕೆ 1,05,49,970 ಡೋಸ್ ಲಸಿಕೆ ಲಭ್ಯವಾಗಿದ್ದು, ರಾಜ್ಯ ಸರ್ಕಾರ 3 ಲಕ್ಷ ಡೋಸ್ ತರಿಸಿಕೊಂಡಿದೆ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಕೊರೋನಾ ವಿರುದ್ಧದ ಈ ಸಮರದಲ್ಲಿ ಲಸಿಕೆ ನಮ್ಮ ಅತ್ಯಂತ ದೊಡ್ಡ ಅಸ್ತ್ರವಾಗಿದ್ದು, ಪ್ರತಿಯೊಬ್ಬರಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.

ಮೊದಲ ಮತ್ತು ಎರಡನೇ ಡೋಸ್ ಸೇರಿದಂತೆ ಇದುವರೆಗೆ ಒಂದು ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com