ಕೊಡಗು ಜಿಲ್ಲೆಯಲ್ಲಿ ಹೊಸ ಕರ್ಫ್ಯೂ ಆದೇಶ: ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ!

ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ವೇಗವಾಗಿ ಹರಡುತ್ತಿದ್ದು, ಜಿಲ್ಲೆಯ ಸ್ಥಿತಿ ಕೈಮೀರಿ ಹೋಗುತ್ತಿದೆ. ಹೀಗಾಗಿಯೇ ಜಿಲ್ಲಾಡಳಿತ ಹೊಸ ಕರ್ಫ್ಯೂ ಆದೇಶವನ್ನು ಜಾರಿ ಮಾಡಿದೆ.
ಕೊಡಗಿನಲ್ಲಿ ಖರೀದಿಗೆ ಮುಗಿಬಿದ್ದ ಜನ
ಕೊಡಗಿನಲ್ಲಿ ಖರೀದಿಗೆ ಮುಗಿಬಿದ್ದ ಜನ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ವೇಗವಾಗಿ ಹರಡುತ್ತಿದ್ದು, ಜಿಲ್ಲೆಯ ಸ್ಥಿತಿ ಕೈಮೀರಿ ಹೋಗುತ್ತಿದೆ. ಹೀಗಾಗಿಯೇ ಜಿಲ್ಲಾಡಳಿತ ಹೊಸ ಕರ್ಫ್ಯೂ ಆದೇಶವನ್ನು ಜಾರಿ ಮಾಡಿದೆ.

ಹೊಸ ಲಾಕ್ ಡೌನ್ ಆದೇಶದಿಂದ ಜನ ಸಾಮಾನ್ಯರು ಆತಂಕದಲ್ಲಿಯೇ ಅಂಗಡಿಗೆ ತೆರಳಿ ಅಗತ್ಯ ಸಾಮಾನು ಖರೀದಿಸಿದರು. ಎಷ್ಟೇ ಪ್ರಯತ್ನಿಸಿದರೂ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ವಾರದಲ್ಲಿ ಕೇವಲ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. 

ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಇನ್ನು ಹಾಲು ಮತ್ತು ಪೇಪರ್ ಗೆ ಪ್ರತೀ ದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅವಕಾಶ ನೀಡಿ ಆದೇಶ ಹೊರಡಿಸಲಾಗಿದೆ. ಇನ್ನು ಉಳಿದಂತೆ ವಾರದ ಐದು ದಿನ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಿ ಆದೇಶಹೊರಡಿಸಿದ್ದಾರೆ.

ಹೊಸ ನಿಯಮದಿಂದ ಜನ ಮತ್ತಷ್ಟು ಗಾಬರಿಗೊಂಡು ಹೆಚ್ಚೆಚ್ಚು ಪ್ರಮಾಣದಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸಲು ಬೀದಿಗಿಳಿದರು. ಸೋಮವಾರಪೇಟೆ, ವಿರಾಜಪೇಟೆ, ಮಡಿಕೇರಿ, ಗೋಣಿಕೊಪ್ಪಗಳಲ್ಲಿ ಜನ ಹೆಚ್ಚಿನ ಪ್ರಮಾಣದಲ್ಲಿ ರಸ್ತೆಗಳಿದು ಖರೀದಿಗೆ ಮುಂದಾಗಿದ್ದರು. ಹೀಗಾಗಿ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com