ಜೀವರಕ್ಷಕ ಆಕ್ಸಿಜನ್ ಕೊರತೆಯಿಂದ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಮತ್ತೆ 14 ರೋಗಿಗಳು ಸಾವು

ಆಕ್ಸಿಜನ್ ಕೊರತೆಯಿಂದ ಚಾಮರಾಜನಗರ ಜಿಲ್ಲೆಯಲ್ಲಿ 24 ಮಂದಿ ಕೋವಿಡ್ ರೋಗಿಗಳು ಮೃತಪಟ್ಟ ಬೆನ್ನಲ್ಲೇ, ನಿನ್ನೆ ಒಂದೇ ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಸ್ಪತ್ರೆಗಳಲ್ಲಿ ಇದೇ ರೀತಿ ಆಕ್ಸಿಜನ್ ಕೊರತೆಯಿಂದ ಇನ್ನೂ 14 ರೋಗಿಗಳು ಮೃತಪಟ್ಟಿದ್ದಾರೆ.
ಬೆಂಗಳೂರಿನ ಆಡುಗೋಡಿಯ ತಾತ್ಕಾಲಿಕ ಕೋವಿಡ್ ಕೇರ್ ಕೇಂದ್ರದಲ್ಲಿ  ಆಕ್ಸಿಜನ್ ಸಿಲಿಂಡರ್ ಕೊಂಡೊಯ್ಯುತ್ತಿರುವ ವಾರ್ಡ್ ಬಾಯ್
ಬೆಂಗಳೂರಿನ ಆಡುಗೋಡಿಯ ತಾತ್ಕಾಲಿಕ ಕೋವಿಡ್ ಕೇರ್ ಕೇಂದ್ರದಲ್ಲಿ ಆಕ್ಸಿಜನ್ ಸಿಲಿಂಡರ್ ಕೊಂಡೊಯ್ಯುತ್ತಿರುವ ವಾರ್ಡ್ ಬಾಯ್

ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ಬೆಂಗಳೂರು: ಆಕ್ಸಿಜನ್ ಕೊರತೆಯಿಂದ ಚಾಮರಾಜನಗರ ಜಿಲ್ಲೆಯಲ್ಲಿ 24 ಮಂದಿ ಕೋವಿಡ್ ರೋಗಿಗಳು ಮೃತಪಟ್ಟ ಬೆನ್ನಲ್ಲೇ, ನಿನ್ನೆ ಒಂದೇ ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಸ್ಪತ್ರೆಗಳಲ್ಲಿ ಇದೇ ರೀತಿ ಆಕ್ಸಿಜನ್ ಕೊರತೆಯಿಂದ ಇನ್ನೂ 14 ರೋಗಿಗಳು ಮೃತಪಟ್ಟಿದ್ದಾರೆ.

ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿರುವುದು ಎಂದು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದರೆ ಇತ್ತ ಅಧಿಕಾರಿಗಳು ಮಾತ್ರ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಟ್ಟಿರುವುದನ್ನು ನಿರಾಕರಿಸುತ್ತಾರೆ.

ನಿನ್ನೆ ಸಾಯಂಕಾಲ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ 5 ಮಂದಿ ಕೋವಿಡ್ ರೋಗಿಗಳು ಆಕ್ಸಿಜನ್ ನೆರವಿನಿಂದ ಉಸಿರಾಡುತ್ತಿದ್ದವರು ಮೃತಪಟ್ಟಿದ್ದಾರೆ. ಆಕ್ಸಿಜನ್ ಕೊರತೆಯಿಂದ ನಮ್ಮವರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದರೆ ಜಿಲ್ಲಾ ಆರೋಗ್ಯಾಧಿಕಾರಿ ಡಾ ಯಶವಂತ್ ಮಡಿಂಕರ್, ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಲ್ಲ ಎನ್ನುತ್ತಾರೆ.

ಕಲಬುರಗಿಯಲ್ಲಿ ನಾಲ್ಕು ಮಂದಿ ಕೋವಿಡ್ ರೋಗಿಗಳು ಒಂದೇ ದಿನದಲ್ಲಿ ಅಫ್ಜಲ್ ಪುರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇಬ್ಬರು ಕೋವಿಡ್ -19ನಿಂದ ಮೃತಪಟ್ಟರೆ ಮತ್ತಿಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಮೊನ್ನೆ ಸೋಮವಾರ ಅಪರಾಹ್ನ ಆಸ್ಪತ್ರೆಗೆ ದಾಖಲಾಗಿದ್ದ ಮತ್ತಿಬ್ಬರನ್ನು ಕೋವಿಡ್ ರೋಗಿಗಳೆಂದು ಶಂಕಿಸಲಾಗಿತ್ತು. ಸಾಯಂಕಾಲದ ಹೊತ್ತಗೆ ನಿಧನರಾದರು. ಗಂಭೀರ ಸ್ಥಿತಿಯಲ್ಲಿ ಬಂದಿದ್ದರಿಂದ ಅವರ ಗಂಟಲು ದ್ರವ ಮಾದರಿಯನ್ನು ಕೂಡ ಪರೀಕ್ಷೆಗೆ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ.

ನಮ್ಮಲ್ಲಿ ಆಕ್ಸಿಜನ್ ಕೊರತೆಯಿಲ್ಲ, ಕಲಬುರಗಿಯ ಯಾವ ಆಸ್ಪತ್ರೆಯಲ್ಲಿ ಕೂಡ ಸಮಸ್ಯೆಯಿಲ್ಲ. ಬೇಡಿಕೆ ಬಂದ ಕೂಡಲೇ ಜಿಲ್ಲಾಡಳಿತ ಆಕ್ಸಿಜನ್ ಪೂರೈಕೆಗೆ ವ್ಯವಸ್ಥೆ ಮಾಡುತ್ತದೆ ಎಂದು ಜಿಲ್ಲಾಡಳಿತದ ಅಧಿಕಾರಿಗಳು ಹೇಳುತ್ತಾರೆ.

ಬೆಳಗಾವಿಯಲ್ಲಿ ಕಳೆದ 10 ದಿನಗಳಲ್ಲಿ ಒಂದೇ ಕುಟುಂಬದ ಮೂವರು ನಿಧನರಾಗಿದ್ದಾರೆ. ಬೆಳಗಾವಿಯ ಖಾಸಗಿ ಆಸ್ಪತ್ರೆ.ಯಲ್ಲಿ ಆಕ್ಸಿಜನ್ ಕೊರತೆಯಿಂದ ಎಂದು ಹೇಳಲಾಗುತ್ತಿದೆ. ಇವರಿಗೆ ಮೂವರಿಗೂ ಕೊರೋನಾ ಪಾಸಿಟಿವ್ ಬಂದಿತ್ತು. ಮೃತರನ್ನು ಪಾರ್ವತಿ ಕೃಷ್ಣ ಟೆರಗಾಂವ್, ಅವರ ಪತಿ ಕೃಷ್ಣ ಭೀಮಪ್ಪ ಟೆರಗಾಂವ್ ಮತ್ತು ಅವರ ಪುತ್ರ ಪ್ರಶಾಂತ್ ಟೆರಂಗಾವ್ ಎಂದು ಗುರುತಿಸಲಾಗಿದ್ದು ತಂದೆ ತಾಯಿ 75 ವರ್ಷ ಕಳೆದ ವಯೋವೃದ್ಧರಾಗಿದ್ದಾರೆ.

24 ರೋಗಿಗಳು ಆಕ್ಸಿಜನ್ ಕೊರತೆಯಿಂದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ನಂತರ ಜಿಲ್ಲೆಯಲ್ಲಿ ಪರಿಸ್ಥಿತಿ ಈಗ ಸಹಜ ಸ್ಥಿತಿಗೆ ಬರುತ್ತಿದೆ. ರೋಗಿಗಳು ದಾಖಲಾಗುತ್ತಿದ್ದು, ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆಯಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com