ಬೆಂಗಳೂರಿನಲ್ಲಿ ಕೊರೋನಾ ಹೆಚ್ಚಳ: 168 ಸಾಮಾನ್ಯ ಬೆಡ್ ಆಕ್ಸಿಜನ್ ಯುಕ್ತ ಬೆಡ್ ಗಳಾಗಿ ಪರಿವರ್ತನೆ 

ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 168 ಸಾಮಾನ್ಯ ಬೆಡ್ ಗಳನ್ನು ಆಕ್ಸಿಜನ್‌ಯುಕ್ತ ಬೆಡ್ ಗಳನ್ನಾಗಿ ಪರಿವರ್ತಿಸಲು ಸೂಚಿಸಲಾಗಿದೆ. ಸದ್ಯ ನಗರದ ಕೋವಿಡ್ ಸೋಂಕಿತರ ಆರೈಕೆ ಕೇಂದ್ರಗಳಲ್ಲಿ 2 ಸಾವಿರ ಬೆಡ್ ಗಳು ಲಭ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 168 ಸಾಮಾನ್ಯ ಬೆಡ್ ಗಳನ್ನು ಆಕ್ಸಿಜನ್‌ಯುಕ್ತ ಬೆಡ್ ಗಳನ್ನಾಗಿ ಪರಿವರ್ತಿಸಲು ಸೂಚಿಸಲಾಗಿದೆ. ಸದ್ಯ ನಗರದ ಕೋವಿಡ್ ಸೋಂಕಿತರ ಆರೈಕೆ ಕೇಂದ್ರಗಳಲ್ಲಿ 2 ಸಾವಿರ ಬೆಡ್ ಗಳು ಲಭ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಹಾಸಿಗೆಗಳ ಪೈಕಿ ಶೇಕಡ 50ರಷ್ಟು ಆಕ್ಸಿಜನ್ ಹಾಸಿಗೆಗಳಾಗಿ ಪರಿವರ್ತಿಸಲು  ಉದ್ದೇಶಿಸಲಾಗಿದೆ. ಈಗಿರುವ ವ್ಯವಸ್ಥೆಯನ್ನು ಇನ್ನಷ್ಟು ಬಲಿಷ್ಠಗೊಳಿಸಿ, ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಬಿಬಿಎಂಪಿ ಎಲ್ಲಾ ರೀತಿಯಿಂದಲೂ ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ.

ಕೋವಿಡ್ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟಲು ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುತ್ತಿದ್ದೇವೆ. ಸೋಂಕನ್ನು ನಿಗ್ರಹಿಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಹ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇದುವರೆಗೆ 1 ಕೋಟಿಯ 16 ಲಕ್ಷದ 03 ಸಾವಿರದ 991 ಮಂದಿ ಮೇಲೆ ಕೊರೋನಾ ಪರೀಕ್ಷೆ ಮಾಡಲಾಗಿದ್ದು ಕಳೆದ 24 ಗಂಟೆಗಳಲ್ಲಿ 59 ಸಾವಿರದ 368 ಮಂದಿಯ ಮೇಲೆ ಪರೀಕ್ಷೆ ಮಾಡಲಾಗಿದೆ.

ನಿನ್ನೆಯ ಹೊತ್ತಿಗೆ ರಾಜಧಾನಿ ಬೆಂಗಳೂರಿನಲ್ಲಿ 8 ಲಕ್ಷದ 63 ಸಾವಿರದ 380 ಸೋಂಕಿತರಿದ್ದು, 5 ಲಕ್ಷದ 43 ಸಾವಿರದ 059 ಮಂದಿ ಗುಣಮುಖರಾಗಿದ್ದಾರೆ. ನಗರದಲ್ಲಿ ಇದುವರೆಗೆ 7 ಸಾವಿರದ 007 ಮಂದಿ ಮೃತಪಟ್ಟಿದ್ದು ನಿನ್ನೆ ಒಂದೇ ದಿನ 161 ಮಂದಿ ಮೃತರಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com