ಕರ್ನಾಟಕಕ್ಕೆ ತಕ್ಷಣ 1,200 ಮೆಟ್ರಿಕ್ ಟನ್ ಆಕ್ಸಿಜನ್ ಕೊಡಿ: ಕೇಂದ್ರಕ್ಕೆ ಹೈಕೋರ್ಟ್ ಆದೇಶ

ಸಾಕಷ್ಟು ಸಮಯ ನೀಡಿದ ನಂತರವೂ ಕರ್ನಾಟಕಕ್ಕೆ ಆಮ್ಲಜನಕ ಕೋಟಾ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ವಿಫಲವಾಗಿದ್ದು, ಆಕ್ಸಿಜನ್ ಕೊರತೆ ಪರಿಗಣಿಸಿ...
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಸಾಕಷ್ಟು ಸಮಯ ನೀಡಿದ ನಂತರವೂ ಕರ್ನಾಟಕಕ್ಕೆ ಆಮ್ಲಜನಕ ಕೋಟಾ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ವಿಫಲವಾಗಿದ್ದು, ಆಕ್ಸಿಜನ್ ಕೊರತೆ ಪರಿಗಣಿಸಿ ರಾಜ್ಯಕ್ಕೆ ತಕ್ಷಣ ದಿನಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ಸೂಚಿಸಿದೆ.

ಕೋವಿಡ್‌ಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ತಕ್ಷಣದಿಂದಲೇ ಅನ್ವಯವಾಗುವಂತೆ ರಾಜ್ಯದ ಆಮ್ಲಜನಕ ಪಾಲನ್ನು ಪ್ರತಿ ದಿನಕ್ಕೆ 1,200 ಟನ್‌ಗೆ ಹೆಚ್ಚಿಸುವಂತೆ ಕೇಂದ್ರಕ್ಕೆ ಆದೇಶಿಸಿದೆ.

ಮುಂದಿನ ಏಳು ದಿನಗಳಲ್ಲಿ ಆಮ್ಲಜನಕದ ಬೇಡಿಕೆಯನ್ನು ಆಧರಿಸಿ ಸಮರ್ಪಕ ಪೂರೈಕೆಗಾಗಿ ಕೇಂದ್ರಕ್ಕೆ ಹೆಚ್ಚುವರಿ ಪ್ರಸ್ತಾವನೆ ಸಲ್ಲಿಸುವಂತೆ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. 

ರಾಜ್ಯದ ಆಮ್ಲಜನಕ ಹಂಚಿಕೆ ಪಾಲನ್ನು 865 ಟನ್‌ ನಿಂದ 965 ಟನ್‌ಗಳಿಗೆ ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಇದೇ ವೇಳೆ ಆಮ್ಲಜನಕ ಬಫರ್ ಸ್ಟಾಕ್ ಮಾಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿತ್ತು. ಆದರೆ ಈ ತನಕ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com