ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕ ಪೂರ್ಣ ಬಳಕೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಶೆಟ್ಟರ್ ಮನವಿ

ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ನಮ್ಮಲ್ಲೇ ಬಳಕೆ ಮಾಡಿಕೊಳ್ಳಲು ಅನುಮತಿ ನೀಡುವಂತೆ ಕೇಂದ್ರ ಸಚಿವ ಪಿಯೂಶ್ ಗೋಯೆಲ್ ಅವರ ಜೊತೆ ಚರ್ಚಿಸುವುದಾಗಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಬೆಂಗಳೂರು: ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ನಮ್ಮಲ್ಲೇ ಬಳಕೆ ಮಾಡಿಕೊಳ್ಳಲು ಅನುಮತಿ ನೀಡುವಂತೆ ಕೇಂದ್ರ ಸಚಿವ ಪಿಯೂಶ್ ಗೋಯೆಲ್ ಅವರ ಜೊತೆ ಚರ್ಚಿಸುವುದಾಗಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಆಕ್ಸಿಜನ್​ ಸಮಸ್ಯೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಚಿವ ಜಗದೀಶ್​ ಶೆಟ್ಟರ್​ ಈ ಕುರಿತು ಪರಿಶೀಲನೆ ನಡೆಸಿದರು. ಸಭೆ ಬಳಿಕ ಮಾತನಾಡಿರುವ ಅವರು ನಮ್ಮ ರಾಜ್ಯದಲ್ಲಿ ಆಕ್ಸಿಜನ್ ಉತ್ಪಾದನೆ ಆಗುತ್ತಿದೆ. ಅದರ ಬಳಕೆಗೆ ನಮಗೆ ಅವಕಾಶ ಮಾಡಿಕೊಡಿ ಎಂದು ಕೇಂದ್ರದ ಬಳಿ ಮನವಿ ಮಾಡಿಕೊಂಡಿದ್ದೇವೆ. ಈ ಕುರಿತು ಕೇಂದ್ರ ಸಚಿವ ಪಿಯೂಶ್​ ಗೊಯಲ್​ ಜೊತೆ ದೂರವಾಣಿ ಮೂಲಕ ಮಾತನಾಡಲಾಗಿದೆ ಎಂದರು

ರಾಜ್ಯದಲ್ಲಿನ ಆಕ್ಸಿಜನ್​ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನು ಆಕ್ಸಿಜನ್ ಟ್ರಾನ್ಸ್‌ಪೋರ್ಟ್‌ ಸಮಸ್ಯೆ ವಿಚಾರ ಕುರಿತು ತಿಳಿಸಿದ ಅವರು, ಆಮ್ಲಜನಕವನ್ನು ಟ್ಯಾಂಕರ್‌ ಮೂಲಕ ಕಳಿಸುವ ಕೆಲಸ ಮಾಡುತ್ತಿದ್ದೇವೆ. ಪ್ರತಿ ದಿನ ಕೆಲಸ ಮಾಡಿ ಸಮಸ್ಯೆ ಸರಿಪಡಿಸಬೇಕು, ನಾಲ್ಕು ದಿನ ಎಂದು ಹೇಳಿದರೆ ಸಮಸ್ಯೆ  ಬಗೆಹರಿಯಲ್ಲ. ಪ್ರಾಮಾಣಿಕ ಕೆಲಸ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶಕ್ಕೆ ಅರಬ್​​ನಿಂದ 80 ಮೆಟ್ರಿಕ್ ಟನ್ ಆಕ್ಸಿಜನ್ ಬರುಲಿದ್ದು, ಅದರಲ್ಲಿ ನಮ್ಮ ರಾಜ್ಯಕ್ಕೂ ಆಕ್ಸಿಜನ್ ಸಿಗಲಿದೆ. ಬೇರೆ ರಾಜ್ಯದಿಂದ ಬರಬೇಕಿರುವ ಆಕ್ಸಿಜನ್ ತರಲು ಟ್ರಾನ್ಸ್‌ಪೋರ್ಟ್‌ ಚಾರ್ಜ್ ಹೆಚ್ಚಳವಾಗಲಿದೆ. ಬೆಂಗಳೂರು ಹೊಸೂರು ಸೇರಿದಂತೆ ಹಲವು ಭಾಗದಿಂದ ತರಿಸಲಾಗುವುದು. ಮುಂದಿನ ದಿನಗಳಲ್ಲಿ 1,500 ಟನ್ ಆಕ್ಸಿಜನ್ ಲಭ್ಯವಾಗಲಿದೆ ಎಂದರು.

ದೂರದ ಒಡಿಶಾ ಹಾಗೂ ಇನ್ನಿತರೆ ರಾಜ್ಯಗಳಿಂದ ಆಮ್ಲಜನಕ ಸಾಗಾಣಿಕೆಯನ್ನು ಚುರುಕುಗೊಳಿಸಲು ಹಾಗೂ ಖರ್ಚನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರೈಲ್ವೇ ಟ್ಯಾಂಕರ್‌ಗಳ ಬಳಕೆ ಅವಶ್ಯಕ. ಈ ನಿಟ್ಟಿನಲ್ಲಿ 4 ಕಂಟೇನರ್‌ಗಳು ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಲಭಿಸಲಿದೆ. ಇವುಗಳ ಮೂಲಕ 80 ಎಂ.ಟಿ ಯಷ್ಟು ಆಮ್ಲಜನಕ ರಾಜ್ಯಕ್ಕೆ ತರಬಹುದಾಗಿದೆ.

ರಾಜ್ಯದಲ್ಲಿ ಪ್ರಸ್ತುತ 170 ಆಮ್ಲಜನಕ ಸಾಗಾಣಿಕಾ ಟ್ಯಾಂಕರ್‌ ಗಳು ಕಾರ್ಯನಿರ್ವಹಿಸುತ್ತಿವೆ. ಅದರಲ್ಲಿ 68 ಟ್ಯಾಂಕರ್‌ಗಳು ಬೇರೆ ರಾಜ್ಯಕ್ಕೆ ಪೂರೈಕೆ ಮಾಡುವ ಕಾರ್ಯದಲ್ಲಿವೆ. ರಾಜ್ಯಕ್ಕೆ ಇನ್ನಷ್ಟು ಟ್ಯಾಂಕರ್‌ಗಳ ಅವಶ್ಯಕತೆ ಇದ್ದು, ಇನ್ನೂ ಹೆಚ್ಚಿನ ಟ್ಯಾಂಕರ್‌ ಗಳನ್ನು ಮಾರ್ಪಾಡಿಸುವ ಕಾರ್ಯವನ್ನು ಚುರುಕುಗೊಳಿಸುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com